ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಪ್ರವೇಶ ಮಿತಿ ಹೆಚ್ಚಳ

Last Updated 31 ಮೇ 2022, 20:26 IST
ಅಕ್ಷರ ಗಾತ್ರ

ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯು ತರಗತಿಗಳಿಗೆ ಪ್ರವೇಶ ದಾಖಲಾತಿ ಮಿತಿ 80ರಿಂದ 100ಕ್ಕೆ ಹೆಚ್ಚಿಸಲಾಗಿದೆ.

ರಾಜ್ಯದ ಖಾಸಗಿ ಅನುದಾನಿತ ಮತ್ತು ಶಾಶ್ವತ ಅನುದಾನರಹಿತ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಒಂದು ವಿಭಾಗಕ್ಕೆ 20 ಹೆಚ್ಚುವರಿ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಆದರೆ, ಅಗತ್ಯ ಮೂಲಸೌಕರ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

2022–23ನೇ ಸಾಲಿಗೆ ಮಾತ್ರ ಈ ಸೂಚನೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

ಹೊಸ ಭಾಷೆ, ಹೊಸ ಸಂಯೋಜನೆ ಹಾಗೂ ಹೆಚ್ಚುವರಿ ವಿಭಾಗಗಳ ಮಂಜೂರಾತಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್‌ 5ರವರೆಗೆ ವಿಸ್ತರಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸುತ್ತೋಲೆ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT