ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯುಸಿ ಪರೀಕ್ಷೆ: ಲಸಿಕೆ ಪಡೆದ ವರದಿ ಕಡ್ಡಾಯವಲ್ಲ

Last Updated 21 ಏಪ್ರಿಲ್ 2022, 19:50 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರಾಜ್ಯದಾದ್ಯಂತ ಶುಕ್ರವಾರ ಆರಂಭವಾಗುತ್ತಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಪಡೆದ ವರದಿ ಕಡ್ಡಾಯವಲ್ಲ. ಆದರೆ, ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಕಡ್ಡಾಯ ಎಂದು ‌ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಪರೀಕ್ಷೆಗೆ ಆರೋಗ್ಯ ಇಲಾಖೆ ಹಾಗೂ ತಾಂತ್ರಿಕ ಸಲಹಾ ಸಮಿತಿ ಎಸ್ಒಪಿ ಜಾರಿ ಮಾಡಿದೆ. ‌ಅದರಲ್ಲಿ ಪ್ರಮುಖವಾಗಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಕಡ್ಡಾಯವಾಗಿದೆ.‌ ಲಸಿಕೆ ಪಡೆದ ಪ್ರಮಾಣಪತ್ರವನ್ನೂ ಪರಿಶೀಲಿಸುವಂತೆ ಸಲಹೆ ನೀಡಿದೆ.‌ ಆದರೆ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಲಸಿಕೆ ಪಡೆದ ವರದಿ ಕಡ್ಡಾಯ ಅಲ್ಲ ಎಂದು ಸ್ಪಷ್ಟಪಡಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಹಾಗೂ ಸ್ಯಾನಿಟೈಸ್ ಮಾಡುವುದು ಕಡ್ಡಾಯ. ಅದರ ಹೊರತಾಗಿ, ಯಾವುದಾದರೂ ವಿದ್ಯಾರ್ಥಿಗೆ ಕೋವಿಡ್‌ ಸೋಂಕು ದೃಢಪಟ್ಟರೆ ಪ್ರತ್ಯೇಕ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT