ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ ಮೊದಲ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ: ಸಚಿವ ಬಿ.ಸಿ ನಾಗೇಶ್‌

Last Updated 9 ಮಾರ್ಚ್ 2023, 6:29 IST
ಅಕ್ಷರ ಗಾತ್ರ

ತುಮಕೂರು: ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಸುಮಾರು 7 ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿ ಸ್ನೇಹಿಯಾಗಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT