ಬುಧವಾರ, ಡಿಸೆಂಬರ್ 8, 2021
23 °C

ಪಿಯು ಕಾಲೇಜು: 3,552 ಅತಿಥಿ ಉಪನ್ಯಾಸಕರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ (2021– 22) ಸಾಲಿನಲ್ಲಿ 3,552 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.

2020–21ನೇ ಸಾಲಿನಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಒಟ್ಟು 2,832 ಉಪನ್ಯಾಸಕರಿಗೆ ಎದುರಾಗಿ 1,835 ಅತಿಥಿ ಉಪನ್ಯಾಸಕರನ್ನು ₹ 9 ಸಾವಿರ ಗೌರವಧನದ ಆಧಾರದಲ್ಲಿ ಫೆಬ್ರುವರಿ ತಿಂಗಳಿನಿಂದ ನೇಮಿಸಿಕೊಳ್ಳಲಾಗಿತ್ತು. 

ಆದರೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 8 ಲಕ್ಷದಿಂದ 9 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹೀಗಾಗಿ,  ಅತಿಥಿ ಉಪನ್ಯಾಸಕರ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. 10 ಗಂಟೆಯ ಕಾರ್ಯಭಾರಕ್ಕೆ ನೀಡುತ್ತಿದ್ದ ₹ 9 ಸಾವಿರ ಗೌರವಧನವನ್ನು ₹ 12 ಸಾವಿರಕ್ಕೆ ಹೆಚ್ಚಿಸುವಂತೆ ಬೇಡಿಕೆ ಬಂದಿತ್ತು. ಹೀಗಾಗಿ, ₹ 12 ಸಾವಿರ ಗೌರವಧನದಂತೆ 6 ತಿಂಗಳಿಗೆ ₹ 34.09 ಕೋಟಿ ಬಿಡುಗಡೆ ಮಾಡುವಂತೆ ಇಲಾಖೆಯ ನಿರ್ದೇಶಕಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಆದರೆ, ಸರ್ಕಾರ 3,552 ಅತಿಥಿ ಉಪನ್ಯಾಸಕರಿಗೆ ಮಾಸಿಕ ₹ 9,000 ಗೌರವಧನದಂತೆ ಒಟ್ಟು 8 ತಿಂಗಳಿಗೆ ₹ 25.57 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು