ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಮರು ಮೌಲ್ಯಮಾಪನ: ಒಂದು ಅಂಕ ಹೆಚ್ಚಾದರೂ ಪರಿಗಣಿಸಿ ಹೊಸ ಅಂಕಪಟ್ಟಿ

Last Updated 9 ಫೆಬ್ರವರಿ 2023, 16:28 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಿ, ಹೊಸ ಅಂಕಪಟ್ಟಿ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಪ್ರಸ್ತುತ ಇದ್ದ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸಿದ ವಿದ್ಯಾರ್ಥಿಯ ಮರು ಮೌಲ್ಯಮಾಪನದಲ್ಲಿ ಪತ್ರಿಕೆಯ ಒಟ್ಟು ಅಂಕಗಳ ಶೇ 6ರಷ್ಟು ಹೆಚ್ಚು ಬಂದರಷ್ಟೇ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿತ್ತು. ಹೊಸ ನಿಯಮ ಇದೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗಲಿದ್ದು, ಮಾರ್ಚ್‌ನಲ್ಲಿ ನಡೆಯುವ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಿಂದಲೇ ಈ ಸೌಲಭ್ಯ ದೊರೆಯಲಿದೆ.

‘ಇಂದಿನ ಸ್ಪರ್ಧಾತ್ಮಕ ಸನ್ನಿವೇಶದಲ್ಲಿ ಪ್ರತಿಯೊಂದು ಅಂಕವೂ ಮುಖ್ಯ. ಹಾಗಾಗಿ, ವಿದ್ಯಾರ್ಥಿ ಸ್ನೇಹಿ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯ ಪಬ್ಲಿಕ್ ಪರೀಕ್ಷೆ ನಿಯಮಗಳು-1997’ಕ್ಕೆ ತಿದ್ದುಪಡಿ ತರಲಾಗುತ್ತಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್‌ ಮಾಹಿತಿ ನೀಡಿದ್ದಾರೆ.
[9:53 pm, 09/02/2023] +91 94822 44999: ಕೆಇಎ: ಅಭ್ಯರ್ಥಿಗಳ ಕರೆಗಳಿಗೆ ನಿರ್ಬಂಧ

ಬೆಂಗಳೂರು: ಯಾವುದೇ ನೇಮಕಾತಿಯ ಮಾಹಿತಿ ಪಡೆಯಲು ಅಭ್ಯರ್ಥಿಗಳು ಮೊಬೈಲ್‌, ದೂರವಾಣಿ ಕರೆ ಮಾಡುವುದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿಷೇಧಿಸಿದೆ.

ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇಮೇಲ್‌, ಪತ್ರದ ಮೂಲಕ ಅಹವಾಲುಗಳನ್ನು ಕಳುಹಿಸಬೇಕು. ಪ್ರಾಧಿಕಾರದ ಸಿಬ್ಬಂದಿ, ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡುವಂತಿಲ್ಲ. ಕಚೇರಿ ವೇಳೆಯಲ್ಲಿ ಅನಗತ್ಯ ಕರೆ ಮಾಡಿ, ಒತ್ತಡ ಹೇರಿ ಮಾಹಿತಿ ಪಡೆಯುವ ಅಭ್ಯರ್ಥಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ಸೂಚಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT