ಶುಕ್ರವಾರ, ಸೆಪ್ಟೆಂಬರ್ 25, 2020
24 °C

ದ್ವಿತೀಯ ಪಿಯು: ಸೆ. 7ರಿಂದ ಪೂರಕ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೆ. 7ರಿಂದ 18ರವರೆಗೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಎಂ. ಕನಗವಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ವೇಳಾಪಟ್ಟಿ: 7ರಂದು ಬೆಳಿಗ್ಗೆ (10.15ರಿಂದ 1.30ರವರೆಗೆ) ಉರ್ದು, ಸಂಸ್ಕೃತ, ಮಧ್ಯಾಹ್ನ (2.15ರಿಂದ 5.30) ಮಾಹಿತಿ ತಂತ್ರಜ್ಞಾನ, ರಿಟೇಲ್‌, ಆಟೊಮೊಬೈಲ್‌, ಹೆಲ್ತ್ ಕೇರ್‌, ಬ್ಯೂಟಿ ಮತ್ತು ವೆಲ್‌ನೆಸ್‌, ಗೃಹ ವಿಜ್ಞಾನ (ಎನ್‌ಎಸ್‌ಕ್ಯೂಎಫ್‌), 8ರಂದು ಬೆಳಿಗ್ಗೆ ಇತಿಹಾಸ, ಸಂಖ್ಯಾಶಾಸ್ತ್ರ, ಜೀವವಿಜ್ಞಾನ, 9ರಂದು ಬೆಳಿಗ್ಗೆ ಹಿಂದಿ, ಮಧ್ಯಾಹ್ನ ತಮಿಳು, ತೆಲುಗು, ಮಲಯಾಳ, ಮರಾಠಿ, ಅರೆಬಿಕ್‌, ಫ್ರೆಂಚ್‌, 10ರಂದು ಬೆಳಿಗ್ಗೆ ಇಂಗ್ಲಿಷ್‌, 11ರಂದು ಬೆಳಿಗ್ಗೆ ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್‌, ಗಣಿತ ವಿಜ್ಞಾನ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಭೂಗರ್ಭ ವಿಜ್ಞಾನ, 12ರಂದು ಬೆಳಿಗ್ಗೆ ಅರ್ಥಶಾಸ್ತ್ರ, ಭೌತವಿಜ್ಞಾನ ಪರೀಕ್ಷೆ ನಡೆಯಲಿದೆ.

14ರಂದು ಬೆಳಿಗ್ಗೆ ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ, ರಸಾಯನ ವಿಜ್ಞಾನ, ಶಿಕ್ಷಣ, 15ರಂದು ಬೆಳಿಗ್ಗೆ ಕನ್ನಡ, 16ರಂದು ಬೆಳಿಗ್ಗೆ ರಾಜ್ಯ ಶಾಸ್ತ್ರ, ಮೂಲ ಗಣಿತ, 17ರಂದು ಬೆಳಿಗ್ಗೆ ಸಮಾಜ ವಿಜ್ಞಾನ, ಲೆಕ್ಕಶಾಸ್ತ್ರ, ಗಣಿತ, 18ರಂದು ಬೆಳಿಗ್ಗೆ ಭೂಗೋಳ ವಿಜ್ಞಾನ, ಮಧ್ಯಾಹ್ನ ಮನಃಶಾಸ್ತ್ರ ಪರೀಕ್ಷೆ ನಡೆಯಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.