ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್ ಪಕ್ಷಕ್ಕಾಗಿ ಮನೆ ಸುಟ್ಟುಕೊಂಡೆ, ಆದ್ರೆ....: ಅಖಂಡ ಶ್ರೀನಿವಾಸಮೂರ್ತಿ 

Last Updated 16 ಏಪ್ರಿಲ್ 2023, 15:30 IST
ಅಕ್ಷರ ಗಾತ್ರ

ಶಿರಸಿ: ನಾನು ಮನೆ ಸುಟ್ಟುಕೊಂಡರೂ ಪಕ್ಷಕ್ಕಾಗಿ ಶ್ರಮಿಸಿದ್ದೇನೆ. ಆದರೆ, ಪಕ್ಷದಿಂದ ನೋವಿನ ಹೊರತು ಮತ್ತೇನೂ ಕೊಡುತ್ತಿಲ್ಲ ಎಂದು
ಪುಲಿಕೇಶಿನಗರ ವಿಧಾನಸಭೆ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಭಾನುವಾರ ಬಂದ ಅವರು ಪತ್ರಕರ್ತರ ಜೊತೆ ಮಾತನಾಡಿ, ರಾಜ್ಯದಲ್ಲಿ ಅತಿ ಹೆಚ್ಚು ಮತ ಪಡೆದರೂ ಕಾಂಗ್ರೆಸ್ ಬಿಡುಗಡೆ ಮಾಡಿದ ಮೂರು ಪಟ್ಟಿಯಲ್ಲಿ ನನ್ನ ಹೆಸರು ಇಲ್ಲ. ಸಾಕಷ್ಟು ನೋವು ತಿಂದಿದ್ದೇನೆ. ನನಗೆ ಟಿಕೆಟ್ ತಪ್ಪಲು ಕಾಂಗ್ರೆಸ್ ಹಿರಿಯ ನಾಯಕರ ಕೈವಾಡ ಅಡಗಿದೆ. ಅವರಿಗೆ ದೇವರು ಒಳ್ಳೆಯದು ಮಾಡಲಿ. ಪಕ್ಷದ ನಡೆಯಿಂದ ಕ್ಷೇತ್ರದ ಮತದಾರರಿಗೂ ನೋವಾಗಿದೆ. ಇದನ್ನು ಪಕ್ಷದವರು ಅರ್ಥ ಮಾಡಿಕೊಳ್ಳಬೇಕು. ನನಗೆ ಅನ್ಯಾಯ ಮಾಡಬೇಡಿ ಎಂದರು. ಕ್ಷೇತ್ರದ ಜನತೆ ಹೇಳಿದಂತೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT