ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಲ್ಸ್‌ ಪೋಲಿಯೊ ಲಸಿಕೆ ವಿತರಣೆ ನಾಳೆ: ಸುಧಾಕರ್

5 ವರ್ಷದೊಳಗಿನ 64 ಲಕ್ಷ ಮಕ್ಕಳ ತಲುಪುವ ಗುರಿ
Last Updated 29 ಜನವರಿ 2021, 17:40 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಲಸಿಕೆ ಅಭಿಯಾನದ ಕಾರಣ ಮುಂದೂಡಲ್ಪಟ್ಟಿದ್ದ ಪಲ್ಸ್ ಪೋಲಿಯೊ ಲಸಿಕೆ ವಿತರಣೆ ಕಾರ್ಯಕ್ರಮವು ಭಾನುವಾರ (ಜ.31) ನಡೆಯಲಿದ್ದು, 5 ವರ್ಷದೊಳಗಿನ 64,07,930 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ್ ಬಯೋಟೆಕ್‌ ಸಂಸ್ಥೆಯು 85,05,60 ಡೋಸ್‌ ಪೋಲಿಯೊ ಲಸಿಕೆಯನ್ನು ರಾಜ್ಯಕ್ಕೆ ಪೂರೈಸಿದೆ. ಲಸಿಕೆ ವಿತರಣೆಗೆ 1,10,179 ಮಂದಿ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ. 904 ಮೊಬೈಲ್ ತಂಡವು ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿದೆ.6,645 ಮೇಲ್ವಿಚಾರಕರ ತಂಡಗಳನ್ನು ರಚಿಸಲಾಗಿದೆ. ಚುನಾವಣೆ ಮತದಾನದ ಮಾದರಿಯ 32,908 ಬೂತ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದರು.

ದೇಶವು ಪೋಲಿಯೊ ಮುಕ್ತವಾಗಿದ್ದರೂ ನೆರೆಯ ರಾಷ್ಟ್ರವಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ 2020ರಲ್ಲಿ 140 ಪ್ರಕರಣಗಳು ವರದಿಯಾಗಿವೆ. ಹಾಗಾಗಿ ಆ ದೇಶಗಳಿಂದ ಪೋಲಿಯೊ ಹರಡುವ ಸಾಧ್ಯತೆಯಿದೆ. ಆದ್ದರಿಂದ ಐದು ವರ್ಷದೊಳಗಿನ ಎಲ್ಲ ಮಕ್ಕಳೂ ಲಸಿಕೆ ಪಡೆದುಕೊಳ್ಳಬೇಕು. ಈ ಮೂಲಕ ಪೋಲಿಯೊ ವಿರುದ್ಧ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಲಸಿಕೆಗೆ ಸಂಬಂಧಿಸಿದ ಮಾಹಿತಿಗೆ ಆರೋಗ್ಯ ಸಹಾಯವಣಿ 104ಕ್ಕೆ ಕೂಡ ಸಂಪರ್ಕಿಸಬಹುದಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಎಲ್ಲ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ಕಳೆದ 10 ವರ್ಷಗಳಿಂದ ದೇಶದಲ್ಲಿ ಯಾವುದೇ ಪೋಲಿಯೊ ಪ್ರಕರಣ ವರದಿಯಾಗಿಲ್ಲ ಎಂದರು.

ಈ ಮೊದಲು ಕೇಂದ್ರ ಆರೋಗ್ಯ ಸಚಿವಾಲಯವು ಜ.17 ರಂದು ಪೋಲಿಯೊ ಲಸಿಕೆ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಆದರೆ, ಜ.16ರಿಂದ ದೇಶದಾದ್ಯಂತ ಕೋವಿಡ್‌ ಲಸಿಕೆ ವಿತರಣೆ ಅಭಿಯಾನ ಆರಂಭವಾದ ಕಾರಣಕ್ಕೆ ಮುಂದೂಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT