ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂತ್ರಜ್ಞಾನದಿಂದ ಗುಣಮಟ್ಟದ ಆರೋಗ್ಯ ಸೇವೆ: ಅಶ್ವತ್ಥನಾರಾಯಣ

Last Updated 4 ಆಗಸ್ಟ್ 2022, 21:30 IST
ಅಕ್ಷರ ಗಾತ್ರ

ಬೆಂಗಳೂರು: ‘ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನ ಅಳವಡಿಕೆಯ ಕಾರ್ಯ ವೇಗವಾಗಿ ನಡೆಯುತ್ತಿದೆ. ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ತಂತ್ರಜ್ಞಾನ ಸಹಕಾರಿ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಸ್ಪರ್ಶ್ ಆಸ್ಪತ್ರೆಯು ನಗರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ‘ಮಾಕೊ’ ರೋಬೊ, 3ಡಿ ಮುದ್ರಣ ತಂತ್ರಜ್ಞಾನ ಸೇರಿ ವಿವಿಧ ಅತ್ಯಾಧುನಿಕ ಚಿಕಿತ್ಸಾ ಕ್ರಮಗಳಿಗೆ ಚಾಲನೆ ನೀಡಿ, ಮಾತನಾಡಿದರು. ‘ತಂತ್ರಜ್ಞಾನಗಳ ನೆರವಿನಿಂದ ವೈದ್ಯಕೀಯ ಕ್ಷೇತ್ರವೂ ವೇಗವಾಗಿ ಪ್ರಗತಿ ಹೊಂದುತ್ತಿದೆ. ರೋಬೊಟಿಕ್ ಸೇರಿ ವಿವಿಧ ತಂತ್ರಜ್ಞಾನಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಗುಣಮಟ್ಟದ ಚಿಕಿತ್ಸೆಗಳು ರೋಗಿಗಳಿಗೆ ದೊರೆಯಲಿವೆ. ಅತ್ಯಾಧುನಿಕ ಚಿಕಿತ್ಸಾ ಕ್ರಮಗಳನ್ನು ಆಸ್ಪತ್ರೆಗಳು ಅಳವಡಿಸಿಕೊಳ್ಳುತ್ತಿರುವುದರಿಂದ ನಗರದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಸಂಖ್ಯೆ ಏರಿಕೆಯಾಗುತ್ತಿದೆ’ ಎಂದು ಹೇಳಿದರು.

ಆಸ್ಪತ್ರೆಯ ಅಧ್ಯಕ್ಷ ಡಾ. ಶರಣ ಶಿವರಾಜ್ ಪಾಟೀಲ, ‘ಸಾಂಪ್ರದಾಯಿಕ ಶಸ್ತ್ರಚಿಕಿತ್ಸೆಗಳಿಗೆ ಹೋಲಿಸಿದರೆ ರೋಬೊಟಿಕ್ ಶಸ್ತ್ರಚಿಕಿತ್ಸೆ ಹೆಚ್ಚು ನಿಖರ. ರೋಗಿಯೂ ಬೇಗ ಚೇತರಿಸಿಕೊಳ್ಳಲು ಸಹಕಾರಿಯಾಗಲಿದೆ. ಕಳೆದೊಂದು ದಶಕದಲ್ಲಿ ವೈದ್ಯಕೀಯ ಕ್ಷೇತ್ರ ಸಾಕಷ್ಟು ಪ್ರಗತಿ ಹೊಂದಿದೆ. ತಂತ್ರಜ್ಞಾನಗಳನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ಚಿಕಿತ್ಸಾ ವೆಚ್ಚವೂ ತಗ್ಗಲಿದೆ’ ಎಂದು ಹೇಳಿದರು.

‘ಮೊಣಕಾಲು, ಸೊಂಟದ ನೋವು ಸೇರಿ ವಿವಿಧ ಸಮಸ್ಯೆಗೆ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಳ್ಳುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ.ಶಸ್ತ್ರಚಿಕಿತ್ಸೆಯನ್ನು ಸುಲಭವಾಗಿಸಲು ‘ಮಾಕೊ’ ರೋಬೊ ಪರಿಚಯಿಸಲಾಗಿದೆ. ಇದರಿಂದಾಗಿ ಸಮಯಕ್ಕೆ ಸರಿಯಾಗಿ ಶಸ್ತ್ರಚಿಕಿತ್ಸೆ ನಡೆಸಲು ಸಾಧ್ಯ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT