ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಒಡೆತನ ಯೋಜನೆಯಡಿ ತ್ವರಿತ ಭೂ ಮಂಜೂರಾತಿ: ಕಾರಜೋಳ

ಇಲಾಖೆ ವ್ಯಾಪ್ತಿಯ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಡಿಸಿಎಂ ಕಾರಜೋಳ ಸೂಚನೆ
Last Updated 9 ಸೆಪ್ಟೆಂಬರ್ 2020, 19:38 IST
ಅಕ್ಷರ ಗಾತ್ರ

ಬೆಂಗಳೂರು: ಭೂ ಒಡೆತನ ಯೋಜನೆಯಡಿ ಜಮೀನು ಖರೀದಿಗೆ ಜಿಲ್ಲಾಮಟ್ಟದಲ್ಲಿ ಆಯ್ಕೆಯಾಗಿರುವ ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ತ್ವರಿತವಾಗಿ ಮಂಜೂರಾತಿ ಪತ್ರಗಳನ್ನು ವಿತರಿಸುವಂತೆ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ನೀಡಿದರು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಬುಧವಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ಭೂ ಒಡೆ
ತನ ಯೋಜನೆಗೆ ಅನುದಾನದ ಕೊರತೆ ಇಲ್ಲ. ಆಯ್ಕೆಯಾಗಿರುವ ಎಲ್ಲ ಫಲಾನುಭವಿಗಳಿಗೂ ಮಂಜೂರಾತಿ ಪತ್ರ ವಿತರಿಸಿ, ಜಮೀನು ಖರೀದಿಗೆ ಅವಕಾಶ ಕಲ್ಪಿಸಬೇಕು’ ಎಂದು ಸೂಚಿಸಿದರು.

ಎಲ್ಲ ನಿಗಮಗಳೂ ಕಾರ್ಪೊರೇಟ್‌ ಕಚೇರಿಗಳಂತೆ ಬದಲಾಗಬೇಕು. ನಿಗಮಗಳ ಕಚೇರಿಗಳನ್ನು ಸಂಪೂರ್ಣವಾಗಿ ಕಂಪ್ಯೂಟರೀಕರಣ ಮಾಡಬೇಕು. ವೈಯಕ್ತಿಕ ಕೊಳವೆ ಬಾವಿ ಕೊರೆಸಲು ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ, ನಿಗದಿತ ಗಡುವಿನೊಳಗೆ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಪ್ರಸಕ್ತ ಸಾಲಿನಲ್ಲಿ ₹236 ಕೋಟಿ ಅನುದಾನ ಒದಗಿಸಲಾಗಿದೆ. ವಿವಿಧ ಯೋಜನೆಗಳಡಿ 26,395 ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ. 60,742 ಅರ್ಜಿಗಳು ಸಲ್ಲಿಕೆಯಾಗಿವೆ. ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ₹ 172 ಕೋಟಿ ಅನುದಾನ ಒದಗಿಸಲಾಗಿದೆ. 14,381 ಫಲಾನುಭವಿಗಳಿಗೆ ಸೌಲಭ್ಯ ನೀಡುವ ಗುರಿ ಇದೆ. 43,390 ಅರ್ಜಿಗಳು ಸಲ್ಲಿಕೆಯಾಗಿವೆ. ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ₹108 ಕೋಟಿ ಒದಗಿಸಿದ್ದು, 26,000 ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವ ಗುರಿ ಇದೆ. 59,645 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಸಲಹೆಗಾರರಾದ ಇ.ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರವಿಕುಮಾರ್ ಸುರಪುರ್, ಹೆಚ್ಚುವರಿನಿರ್ದೇಶಕ ನಾಗೇಶ್, ಆದಿ ಜಾಂಬವ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ನಟರಾಜ್, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹನುಮನರಸಯ್ಯ,ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಂ ಶಿನ್ನಾಳಕರ ಸಭೆಯಲ್ಲಿ ಉ‍ಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT