ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಲೂರು: ರಥೋತ್ಸವಕ್ಕೆ ಕುರಾನ್‌ ಪಠಣ ಮುನ್ನುಡಿ

Last Updated 13 ಏಪ್ರಿಲ್ 2022, 20:05 IST
ಅಕ್ಷರ ಗಾತ್ರ

ಬೇಲೂರು: ಇಲ್ಲಿನ ಐತಿಹಾಸಿಕ ಚನ್ನಕೇಶವಸ್ವಾಮಿ ರಥೋತ್ಸವಕ್ಕೂ ಮುನ್ನ, ಸಂಪ್ರದಾಯದಂತೆದೊಡ್ಡಮೇದೂರಿನ ಮೌಲ್ವಿ ಸೈಯದ್ ಸಜ್ಜಾದ್ ಬಾಷಾ ಅವರು ಬುಧವಾರ ಕುರಾನ್‌ ಪಠಣ ಮಾಡಿ ಕೋಮು ಸಾಮರಸ್ಯವನ್ನು ನೆನಪಿಸಿದರು.

ನಂತರ ರಥವನ್ನು ಮೂಲಸ್ಥಾನದಿಂದ ಎಳೆದು ಗೋಪುರದ ಆಗ್ನೇಯ ದಿಕ್ಕಿನಲ್ಲಿರುವ ಬಯಲು ರಂಗಮಂದಿರದ ಬಳಿಗೆ ತಂದು ನಿಲ್ಲಿಸಲಾಯಿತು.

ಪಠಣದ ಬಳಿಕ ಮಾತನಾಡಿದ ಮೌಲ್ವಿಯು, ‘ಎಲ್ಲರಿಗೂ ಒಳಿತಾಗಲಿ, ಎಲ್ಲಡೆ ಸಾಮರಸ್ಯ ಮೂಡಲಿ. ವಿಶ್ವದಲ್ಲಿ ಶಾಂತಿ ನೆಲೆಸಲಿ. ಎಲ್ಲೆಡೆ ಉತ್ತಮ ಮಳೆ, ಬೆಳೆಯಾಗಲಿ’ ಎಂದು ಪ್ರಾರ್ಥಿಸಿದರು.

‘ವಂಶ ಪಾರಂಪರ್ಯವಾಗಿ ರಥೋತ್ಸವ ವೇಳೆ ಕುರಾನ್ ಪಠಣ ಮಾಡಿಕೊಂಡು ಬಂದಿದ್ದೇವೆ. ನನ್ನ ನಂತರ ನನ್ನ ಮಕ್ಕಳು ಇದನ್ನು ಮುಂದುವರೆಸಿಕೊಂಡು ಹೋಗುತ್ತಾರೆ. ದೇವಸ್ಥಾನದಿಂದ ಪ್ರತಿ ವರ್ಷನನಗೆಅಕ್ಕಿ, ದವಸ ಧಾನ್ಯಗಳನ್ನು ನೀಡಲಾಗುತ್ತಿದೆ’ ಎಂದರು.

ಕೋವಿಡ್‌ ಕಾರಣಕ್ಕೆ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರಥೋತ್ಸವ ಯಾವುದೇ ವಿಘ್ನವಿಲ್ಲದೆ ನೆರವೇರಿತು. ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ, ರಥೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂಬ ವಿವಾದವೂ ಈ ಬಾರಿ ಎದ್ದಿತ್ತು. ಆದರೆ, ಜಿಲ್ಲಾಡಳಿತದ ಸೂಚನೆ ಮೇರೆಗೆ ಎಲ್ಲ ಧರ್ಮದವರಿಗೂ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಹದಿನೈದಕ್ಕೂ ಹೆಚ್ಚು ಮುಸ್ಲಿಮರು ಅಂಗಡಿ ತೆರೆದು ವ್ಯಾಪಾರ ನಡೆಸಿದರು.

ವಿವಿಧ ಜಿಲ್ಲೆಗಳ ಭಕ್ತರೊಂದಿಗೆ, ಹೊರರಾಜ್ಯಗಳ ಭಕ್ತರೂ ಉತ್ಸವವನ್ನು ಕಣ್ತುಂಬಿಕೊಂಡರು.

ರಥಕ್ಕೆ ಬಾಳೆಹಣ್ಣು, ದವನ ಎಸೆದು ಭಕ್ತಿ ಸಮರ್ಪಿಸಿದರು. ಅಭಿಮಾನಿಗಳು ಪುನೀತ್‌ ರಾಜ್‌ಕುಮಾರ್ ಭಾವಚಿತ್ರ ಹಿಡಿದು ಸಾಗಿದ್ದು ಗಮನ ಸೆಳೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT