ಮಂಗಳವಾರ, ಜನವರಿ 26, 2021
28 °C

ಸಚಿವ ಸಂಪುಟ ವಿಸ್ತರಣೆ | ಸರ್ಕಾರ ರಚನೆಗೆ ನೆರವಾದವರಿಗೆ ಒತ್ತು: ಆರ್‌.ಅಶೋಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನೆರವಾಗಿರುವವರಿಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಒತ್ತು ನೀಡಲಾಗುವುದು. ನೂತನ ಸಚಿವರ ಪಟ್ಟಿ ಮಂಗಳವಾರ ಹೊರಬೀಳುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದರು.

ಅಕಾಲಿಕ ಮಳೆಯಿಂದ ಉಂಟಾಗಿರುವ ಬೆಳೆ ಹಾನಿಯ ವೀಕ್ಷಣೆಗೆ ಸೋಮವಾರ ಹಿರಿಯೂರಿಗೆ ಬಂದಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 

‘ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆಗಳು ನಡೆಯುತ್ತಿವೆ. ಪಕ್ಷದ ಹಿರಿಯ ಶಾಸಕರಿಗೂ ಆದ್ಯತೆ ನೀಡಲಾಗುತ್ತದೆ. ಬಿ.ಎಸ್‌.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಸಿಎಂ ಹುದ್ದೆಯಲ್ಲಿ ಅವರೇ ಮುಂದುವರಿಯುವಂತೆ ಶಾಸಕರ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್‌ ಪ್ರಸ್ತಾಪ ಮಾಡಿಲ್ಲ’ ಎಂದು ಹೇಳಿದರು.

‘ಹಣಕಾಸಿನ ಸಮಸ್ಯೆಯ ನಡುವೆಯೂ ಕೋವಿಡ್‌ ಪಿಡುಗನ್ನು ಸಮರ್ಥವಾಗಿ ನಿರ್ವಹಿಸಿದ್ದೇವೆ. ಹೊಟ್ಟೆಕಿಚ್ಚಿನಿಂದ ಕಾಂಗ್ರೆಸ್‌ ನಾಯಕರು ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸುಖದಲ್ಲೇ ಕಾಲ ಕಳೆದಿದ್ದಾರೆ’ ಎಂದು ತಿರುಗೇಟು ನೀಡಿದರು.

‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿಯಲು ಆರಂಭಿಸಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಅವರು ಆಡಿದ ಮಾತುಗಳನ್ನು ಖಂಡಿಸುತ್ತೇವೆ. ಆರ್‌ಎಸ್‌ಎಸ್‌ನವರು ಸಗಣಿ, ಗಂಜಲ ಎತ್ತಿಲ್ಲ ಎಂಬುದನ್ನು ಇವರು ಯಾವಾಗ ನೋಡಿದ್ದರು’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು