ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣ ಸಮಾರಂಭದ ಬಳಿಕ ಗುಂಪು ಫೋಟೊ ತೆಗೆಸಿಕೊಳ್ಳುವಾಗ ಕಂದಾಯ ಸಚಿವ ಆರ್. ಅಶೋಕ ಅವರು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಹೆಗಲ ಮೇಲೆ ಕೈ ಇರಿಸಿರುವುದನ್ನು ಜೆಡಿಎಸ್, ಕಾಂಗ್ರೆಸ್ ಟೀಕಿಸಿವೆ.
ಜೆಡಿಎಸ್ ವರಿಷ್ಠ ದೇವೇಗೌಡರು ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ ಕಾಲಿಗೆರಗಿರುವ ಹಾಗೂ ಅಶೋಕ ಅವರು ನಿರ್ಮಲಾನಂದನಾಥ ಸ್ವಾಮೀಜಿ ಹೆಗಲ ಮೇಲೆ ಕೈ ಇರಿಸಿರುವ ಫೋಟೊಗಳನ್ನು ಹಂಚಿಕೊಂಡಿರುವ ಜೆಡಿಎಸ್ ವಕ್ತಾರ ಗಂಗಾಧರಮೂರ್ತಿ, ಕಂದಾಯ ಸಚಿವರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಈ ಘಟನೆ ಕುರಿತು ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ‘ನಾನು ಸ್ವಾಮೀಜಿಯ ಹೆಸರನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ. ನಮ್ಮ ಸ್ವಾಮೀಜಿಯನ್ನು ನಾವು ದೇವರಂತೆ ಕಾಣುತ್ತೇವೆ. ಅವರು ವಯಸ್ಸಿನಲ್ಲಿ ನನಗಿಂತ ಸ್ವಲ್ಪ ಚಿಕ್ಕವರಾದರೂ ಆ ಪವಿತ್ರ ಪೀಠಕ್ಕೆ ಯಾವ ರೀತಿ ಗೌರವ ನೀಡಬೇಕೋ ಆ ರೀತಿ ನೀಡುತ್ತೇವೆ’ ಎಂದರು.
ಸಾಮಾಜಿಕ ಮಾಧ್ಯಮಗಳಲ್ಲೂ ಫೋಟೊ ಹಂಚಿಕೊಂಡಿರುವ ಹಲವಾರು ಮಂದಿ, ಅಶೋಕ ವಿರುದ್ಧ ಹರಿಹಾಯ್ದಿದ್ದಾರೆ. ಆದರೆ, ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಅವರು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಯವರ ಹೆಗಲ ಮೇಲೆ ಕೈಹಾಕಿದ್ದ ಚಿತ್ರವೊಂದನ್ನು ಅಶೋಕ ಆಪ್ತರು ಹಂಚಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.