ಬುಧವಾರ, ಅಕ್ಟೋಬರ್ 21, 2020
25 °C
ಇನ್ನೂ ಅಂತಿಮಗೊಳ್ಳದ ಅಭ್ಯರ್ಥಿ

ಆರ್‌.ಆರ್‌. ನಗರ: ಜೆಡಿಎಸ್‌ನಿಂದ ಕಾದು ನೋಡುವ ತಂತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಜೆಡಿಎಸ್‌ ಕಾದು ನೋಡುವ ತಂತ್ರದ ಮೊರೆ ಹೋಗಿದೆ. ನಾಮಪತ್ರ ಸಲ್ಲಿಕೆ ಕೊನೆಗೊಳ್ಳಲು ನಾಲ್ಕು ದಿನಗಳಷ್ಟೇ ಬಾಕಿ ಇದ್ದರೂ ಉಮೇದುವಾರರ ಹೆಸರನ್ನು ಅಂತಿಮಗೊಳಿಸಿಲ್ಲ.

ಅ. 2ರಂದು ಆರ್‌.ಆರ್‌. ನಗರ ಕ್ಷೇತ್ರದ ಪಕ್ಷದ ಮುಖಂಡರ ಸಭೆ ನಡೆಸಿದ್ದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮೂವರು ಸಂಭವನೀಯರ ಹೆಸರನ್ನು ಅಂತಿಮಗೊಳಿಸಿದ್ದರು. ಸೋಮವಾರವೇ ನಾಮಪತ್ರ ಸಲ್ಲಿಸುವುದಾಗಿ ಶನಿವಾರ ಹೇಳಿಕೆ ನೀಡಿದ್ದರು. ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದರೆ ಜೆಡಿಎಸ್‌ನಿಂದ ಅವಕಾಶ ನೀಡುವ ಸಾಧ್ಯತೆ ಇದೆ. ಇದಕ್ಕಾಗಿ ಅಭ್ಯರ್ಥಿ ಘೋಷಣೆ ಮಾಡದೆ ಕಾಯಲಾಗುತ್ತಿದೆ ಎಂದೂ ಹೇಳಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು