ಸೋಮವಾರ, ಆಗಸ್ಟ್ 2, 2021
28 °C

ಆರೋಗ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷರಾಗಿ ಆರ್‌. ಶ್ರೀನಿವಾಸ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘದ ಅಧ್ಯಕ್ಷರಾಗಿ ಆರ್‌. ಶ್ರೀನಿವಾಸ್‌ ಆಯ್ಕೆಯಾಗಿದ್ದಾರೆ.

ಜೂನ್‌ 28ರಂದು ನಡೆದ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ 2021ರಿಂದ 2026ರವರೆಗಿನ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಗೌರವಾಧ್ಯಕ್ಷರಾಗಿ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಕಾರ್ಯಾಧ್ಯಕ್ಷರಾಗಿ ಬಿ.ಕೆ. ಗಿರಿಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಎಚ್‌. ಪುಟ್ಟರಾಜು, ಖಜಾಂಚಿಯಾಗಿ ಡಾ.ಎಂ.ಆರ್‌. ರಾಮಚಂದ್ರ ರೆಡ್ಡಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.