ಭಾನುವಾರ, ನವೆಂಬರ್ 29, 2020
22 °C

ರಾಜೀನಾಮೆ ಹಿಂಪಡೆದ ರವೀಂದ್ರನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂಬಡ್ತಿ ನೀಡಲಿಲ್ಲ ಎಂಬ ಕಾರಣಕ್ಕೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಎಡಿಜಿಪಿ ರವೀಂದ್ರನಾಥ್‌ ಅವರು ರಾಜೀನಾಮೆಯನ್ನು ಹಿಂದಕ್ಕೆ ಪಡೆದಿದ್ದಾರೆ.

ಶುಕ್ರವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರವೀಂದ್ರನಾಥ್‌ ಅವರು, ಬಡ್ತಿಯಲ್ಲಿ ತಮಗೆ ಅನ್ಯಾಯವಾಗಿದೆ ಎಂದು ದೂರು ಹೇಳಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ನಿಮಗೆ ಆಗಿರುವ ಅನ್ಯಾಯ ಸರಿಪಡಿಸಲು ಅಧಿಕಾರಿಗಳ ಜತೆ ಮಾತನಾಡುತ್ತೇನೆ, ಮೊದಲು ರಾಜೀನಾಮೆ ಹಿಂದಕ್ಕೆ ಪಡೆಯಿರಿ’ ಎಂದು ಸೂಚಿಸಿದರು.

ಆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ರವೀಂದ್ರನಾಥ್, ‘ಅನ್ಯಾಯ ಸರಿಪಡಿಸುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ. ರಾಜೀನಾಮೆ ಹಿಂಪಡೆದಿದ್ದೇನೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು