ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆಯಿಂದ ಬಿಡುಗಡೆ ‍ಪಡೆದ ನ್ಯಾ. ಸುಧೀಂದ್ರರಾವ್

ರಾಘವೇಶ್ವರ ಭಾರತೀ ಶ್ರೀ ವಿರುದ್ಧದ ಆರೋಪ ಪ್ರಕರಣ
Last Updated 9 ನವೆಂಬರ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿರುವ ಸೆಷನ್ಸ್‌ ಕೋರ್ಟ್‌ ಆದೇಶ ಪ್ರಶ್ನಿಸಿದ ಕ್ರಿಮಿನಲ್‌ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿದಂತೆ ಮುಂದುವರಿದ ವಾದವನ್ನು ಆಲಿಸಲು ಸಮಯಾವಕಾಶ ಕಡಿಮೆ ಇರುವ ಕಾರಣ ನಾನು ಈ ಪ್ರಕರಣದ ವಿಚಾರಣೆಯಿಂದ ಬಿಡುಗಡೆಯಾಗುತ್ತಿದ್ದೇನೆ’ ಎಂದು ನ್ಯಾಯಮೂರ್ತಿ ಎನ್‌.ಕೆ.ಸುಧೀಂದ್ರರಾವ್‌ ವಿಚಾರಣೆಯಿಂದ ಬಿಡುಗಡೆ ಪಡೆದಿದ್ದಾರೆ.

‘ನ್ಯಾಯಾಧೀಶ ಜಿ.ಬಿ. ಮುದಿಗೌಡರ್ 2016ರ ಮಾರ್ಚ್ 31ರಂದು ಹೊರಡಿಸಿದ ಆದೇಶ ರದ್ದುಗೊಳಿಸಬೇಕು’ ಎಂದು ಕೋರಿ ಸಂತ್ರಸ್ತೆ ರಾಮಕಥಾ ಗಾಯಕಿ ಮತ್ತು ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿವಿಚಾರಣೆ ನಡೆಸುತ್ತಿದ್ದ ಏಕಸದಸ್ಯ ನ್ಯಾಯಪೀಠದ ನ್ಯಾಯಮೂರ್ತಿ ಎನ್.ಕೆ.ಸುಧೀಂದ್ರರಾವ್ ಮುಂದಿನ ತಿಂಗಳ 3ಕ್ಕೆ ನಿವೃತ್ತಿ ಹೊಂದುತ್ತಿದ್ದಾರೆ.

ಶ್ರೀಗಳ ಕುರಿತ ‍ಪರ– ವಿರುದ್ಧದ ವ್ಯಾಜ್ಯಗಳಲ್ಲಿ ಈವರೆಗೆ ವಿಚಾರಣೆಯಿಂದ ಹಿಂದೆ ಸರಿದ ಪಟ್ಟಿಗಳ ಸಂಖ್ಯೆ 16 ಇತ್ತು. ಇದೀಗ ಪಾರ್ಟ್‌ ಹರ್ಡ್‌ (ವಾದ ಅರ್ಧ ಆಲಿಸಿದ್ದ) ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಸುಧೀಂದ್ರ ರಾವ್‌ ಬಿಡುಗಡೆ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT