ಬುಧವಾರ, ಸೆಪ್ಟೆಂಬರ್ 22, 2021
23 °C
ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ; ಮೊದಲ ಆರೋಪಿ ಸೆಎರೆ

ಡ್ರಗ್ ಮಾಫಿಯಾ: ನಟಿ ರಾಗಿಣಿ ಸ್ನೇಹಿತ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಎನ್ನಲಾದ ಡ್ರಗ್ ಮಾಫಿಯಾ ಭೇದಿಸುವಲ್ಲಿ ಯಶಸ್ವಿಯಾಗಿರುವ ಸಿಸಿಬಿ ಪೊಲೀಸರು ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ.

‘ನಟಿ ರಾಗಿಣಿ ದ್ವಿವೇದಿ ಅವರ ಸ್ನೇಹಿತ ಬಿ.ಕೆ. ರವಿಶಂಕರ್ ಬಂಧಿತ. ಆತ, ಸಾರಿಗೆ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ). ಡ್ರಗ್ ಪೆಡ್ಲರ್ ಜೊತೆ ಸಂಪರ್ಕವಿಟ್ಟುಕೊಂಡಿದ್ದ ಆತ, ಅವರಿಂದ ಡ್ರಗ್ ಖರೀದಿಸಿ ಹಲವರಿಗೆ ಹಂಚಿಕೆ ಮಾಡುತ್ತಿದ್ದನೆಂದು ಗೊತ್ತಾಗಿದೆ. ಅದರ ಆಧಾರದಲ್ಲಿ ರವಿಶಂಕರ್‌ನನ್ನು ವಶಕ್ಕೆ ಪಡೆಯಲಾಗಿತ್ತು. ಪುರಾವೆಗಳು ಸಿಗುತ್ತಿದ್ದಂತೆ ಆತನನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.

‘ರವಿಶಂಕರ್‌ನನ್ನು ಗುರುವಾರವೇ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಐದು ದಿನ ಕಸ್ಟಡಿಗೆ ಪಡೆಯಲಾಗಿದೆ’ ಎಂದೂ ಹೇಳಿದರು.

ಸಿಸಿಬಿ ನೋಟಿಸ್ ನೀಡಿದರೂ ರಾಗಿಣಿ ವಿಚಾರಣೆಗೆ ಬಂದಿಲ್ಲ. ಶುಕ್ರವಾರ ವಿಚಾರಣೆಗೆ ಬರುವಂತೆ ನೋಟಿಸ್‌
ನೀಡಲಾಗಿದೆ.

ಬಿಜೆಪಿ ಮುಖಂಡ ಸೇರಿ ಇಬ್ಬರು ವಶಕ್ಕೆ: ನಟಿಯರ ಸ್ನೇಹಿತರು ಎನ್ನಲಾದ ರಾಹುಲ್ ಹಾಗೂ ಎಸ್. ಕಾರ್ತಿಕ್‌ರಾಜು ಎಂಬುವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಕೊಕೇನ್ ಸಾಗಣೆ ಆರೋಪದಡಿ ಪ್ರತೀಕ್‌ ಶೆಟ್ಟಿಯನ್ನು ಕಳೆದ ವರ್ಷ ಬಂಧಿಸಲಾಗಿತ್ತು. ಆತನ ಜೊತೆ ರಾಹುಲ್ ಹಾಗೂ ಕಾರ್ತಿಕ್ ರಾಜು ಒಡನಾಟವಿಟ್ಟುಕೊಂಡಿದ್ದರು. ಕಾರ್ತಿಕ್‌ರಾಜು, ಶಿವಾಜಿನಗರ ವಿಧಾನಸಭಾ ಕ್ಷೇತ್ರದ
ಬಿಜೆಪಿ ಮುಖಂಡ ಎಂದು ಹೇಳಲಾಗುತ್ತಿದೆ. ಡ್ರಗ್ ಪೆಡ್ಲರ್‌ಗಳ ಜತೆ ಈತನಿಗೆ ಏನು ಸಂಬಂಧ ಇದೆ ಎಂಬ ಬಗ್ಗೆ ತನಿಖೆ ನಡೆದಿದೆ’ ಎಂದೂ ಅಧಿಕಾರಿ ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು