ಸೋಮವಾರ, ಸೆಪ್ಟೆಂಬರ್ 21, 2020
23 °C

ರಾಗಿಣಿ ನಂಟು: ಕಾಂಗ್ರೆಸ್‌ ಮುಖಂಡನ ಬಗ್ಗೆ ಮಾಹಿತಿ ಪಡೆಯಲು ಗೋವಾಕ್ಕೆ ಸಿಸಿಬಿ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಡ್ರಗ್ಸ್ ಪ್ರಕರಣದಡಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಜೊತೆ ತೆಗೆಸಿಕೊಂಡಿದ್ದ ಫೋಟೊಗಳನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದ ಸ್ಥಳೀಯ ಕಾಂಗ್ರೆಸ್‌ ಮುಖಂಡ ಗಿರೀಶ ಗದಿಗೆಪ್ಪಗೌಡರ ಬಗ್ಗೆ ಮಾಹಿತಿ ಕಲೆ ಹಾಕಲು ನಗರದ ಸಿಸಿಬಿ ಪೊಲೀಸರ ತಂಡ ಗೋವಾಕ್ಕೆ ತೆರಳಿದೆ.

ಇದನ್ನೂ ಓದಿ: ಕಾಂಗ್ರೆಸ್‌ ಮುಖಂಡನ ವಿಚಾರಣೆ

ಗೋವಾದ ಕ್ಯಾಸಿನೊ ಒಂದರಲ್ಲಿ ಮಾಹಿತಿ ಸಂಗ್ರಹಿಸಿ ದಾಖಲೆಗಳನ್ನು ಕಲೆಹಾಕುತ್ತಿದೆ ಎಂದು ಸಿಸಿಬಿ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಗಿರೀಶ ಗದಿಗೆಪ್ಪಗೌಡರ ಹುಬ್ಬಳ್ಳಿಯಲ್ಲಿ ಕೆಪಿಎಲ್‌ ಟೂರ್ನಿಯ ವೇಳೆ ರಾಗಿಣಿ ಜೊತೆ ಫೋಟೊಗಳನ್ನು ತೆಗೆಸಿಕೊಂಡಿದ್ದರು. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ವಿವಾದ ಬೆಳಕಿಗೆ ಬರುತ್ತಿದ್ದಂತೆ ಫೋಟೊಗಳನ್ನು ಸಾಮಾಜಿಕ ತಾಣದಿಂದ ಅಳಿಸಿ ಹಾಕಿದ್ದರು. ಈ ಸಂಶಯದ ಹಿನ್ನೆಲೆಯಲ್ಲಿ ಗಿರೀಶ ಅವರನ್ನು ಸಿಸಿಬಿ ಪೊಲೀಸರು ಎರಡು ದಿನಗಳ ಹಿಂದೆ ವಿಚಾರಣೆ ಮಾಡಿ ಒಂದಷ್ಟು ದಾಖಲೆಗಳನ್ನು ಒದಗಿಸುವಂತೆ ಸೂಚಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು