ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ವಿಚಾರಣೆ: ಹೋರಾಟದ ಹಾದಿ ಇನ್ನಷ್ಟು ಗಟ್ಟಿಗೊಳ್ಳಲಿದೆ– ಕಾಂಗ್ರೆಸ್‌

ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಸತತ ಮೂರನೇ ದಿನ ದೆಹಲಿಯ ಜಾರಿ ನಿರ್ದೆಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್‌ ಪಕ್ಷವು ದೇಶದಾದ್ಯಂತ ಪ್ರತಿಭಟನೆಯನ್ನು ತೀವ್ರಗೊಳಿಸಿದೆ.

ಪ್ರತಿಭಟನೆ ನಡೆಸುತ್ತಿರುವ ಕೆಲ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೊವೊಂದನ್ನು ಟ್ವೀಟ್‌ ಮಾಡಿರುವ ಕೆಪಿಸಿಸಿ, ‘ಕಾಂಗ್ರೆಸ್‍ನ ಹೋರಾಟದ ಹಾದಿ ಇನ್ನಷ್ಟು ಗಟ್ಟಿಗೊಳ್ಳಲಿದೆ’ ಎಂದು ತಿಳಿಸಿದೆ.

‘ಪ್ರಜಾಪ್ರಭುತ್ವದ ತಳಪಾಯ ಅಲುಗಾಡುತ್ತಿದೆ. ಭಾರತ 75 ವರ್ಷಗಳಲ್ಲಿ ಕಾಪಾಡಿಕೊಂಡು ಬಂದಿದ್ದ ಘನತೆ ಇಂದು ಮಣ್ಣುಪಾಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

‘ಗಾಂಧೀಜಿಯವರು ಕಂಡಿದ್ದ ರಾಮರಾಜ್ಯದ ಕನಸು ನಶಿಸಿ ಗೂಂಡಾರಾಜ್ಯ ತಲೆ ಎತ್ತುತ್ತಿದೆ. ಕಾಂಗ್ರೆಸ್‍ನ ಹೋರಾಟದ ಹಾದಿ ಇನ್ನಷ್ಟು ಗಟ್ಟಿಗೊಳ್ಳಲಿದೆ. ಇದ್ಯಾವುದಕ್ಕೂ ಕಾಂಗ್ರೆಸ್ ಕುಗ್ಗಲ್ಲ, ಬಗ್ಗಲ್ಲ, ಹೆದರಲ್ಲ’ ಎಂದು ಕಾಂಗ್ರೆಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT