ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಭಾರತ್ ಜೋಡೊ ಯಾತ್ರೆಯಲ್ಲಿ ಸಿದ್ದರಾಮಯ್ಯ ಕೈ ಹಿಡಿದು ಓಡಿದ ರಾಹುಲ್

Last Updated 7 ಅಕ್ಟೋಬರ್ 2022, 2:11 IST
ಅಕ್ಷರ ಗಾತ್ರ

ಮಂಡ್ಯ: ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೈ ಹಿಡಿದುಕೊಂಡು ರಾಹುಲ್ ಗಾಂಧಿ ಸ್ವಲ್ಪ ದೂರದವರೆಗೆ ಓಡುವ ಮೂಲಕ ಗಮನ ಸೆಳೆದಿದ್ದಾರೆ.

ಈ ಕುರಿತು ವಿಡಿಯೊ ಹಂಚಿರುವ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರ ಆರೋಗ್ಯದ ಗುಟ್ಟು ಅವರ ಆರೋಗ್ಯಕರ ಮನಸ್ಸು. ರಾಹುಲ್ ಜೊತೆ ಹೆಜ್ಜೆ ಹಾಕುತ್ತಾ ನಾನೂ ಯುವಕನಾದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಭರವಸೆಯ ಕೈಗಳು ಹೀಗೆಯೇ ಕೈ ಹಿಡಿದರೆ ದಾರಿ ಎಷ್ಟೇ ದುರ್ಗಮವಾಗಿದ್ದರೂ ಗುರಿ ಮುಟ್ಟುವುದು ಖಚಿತ. ನಮ್ಮ ನಾಯಕ, ನಮ್ಮ ಹೆಮ್ಮೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಕೈ ಹಿಡಿದು ಜೊತೆಯಾಗಿ ಓಡುತ್ತಿರುವ ದೃಶ್ಯವೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ ಅವರು ಸಹ ಗುರುವಾರ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಮೂಲಕ ಪಕ್ಷದ ಕಾರ್ಯಕರ್ತರಿಗೆ ಹೊಸ ಚೈತನ್ಯವನ್ನು ತುಂಬಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT