ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ರಕ್ಷಣೆಗೆ ಏ. 5ರಂದು ಕೋಲಾರದಲ್ಲಿ ರಾಹುಲ್ ಕಹಳೆ: ಕೆ.ಎಚ್.ಮುನಿಯಪ್ಪ

Last Updated 28 ಮಾರ್ಚ್ 2023, 7:01 IST
ಅಕ್ಷರ ಗಾತ್ರ

ಕೋಲಾರ: 'ರಾಹುಲ್ ಗಾಂಧಿ ಏಪ್ರಿಲ್ 5 ಕ್ಕೆ ಕೋಲಾರಕ್ಕೆ ಬರಲಿದ್ದು, ಇಲ್ಲಿಂದಲೇ ಸಂವಿಧಾನ ರಕ್ಷಣೆಗೆ ಕಹಳೆ ಮೊಳಗಿಸಲಿದ್ದಾರೆ' ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 'ರಾಹುಲ್ ಅವರ ಸಂಸತ್ ಸದಸ್ಯತ್ವ ಅನರ್ಹತೆ ಬಳಿಕ ಮೊದಲ ಬಹಿರಂಗ ಸಮಾವೇಶ ಇದಾಗಲಿದೆ. ಪ್ರಧಾನಿ ನರೇಂದ್ರ‌ ಮೋದಿ ಹಾಗೂ ಬಿಜೆಪಿಗೆ ರಾಹುಲ್ ಇಲ್ಲಿಂದಲೇ ಉತ್ತರ ನೀಡಲಿದ್ದಾರೆ. 1 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಲಾಗುವುದು' ಎಂದರು.

'2019ರ ಏ.13 ರಂದು ಕೋಲಾರದಲ್ಲಿ ರಾಹುಲ್ ಭಾಷಣ ಮಾಡಿದ್ದರು. ಹೀಗಾಗಿ, ಇಲ್ಲಿಯೇ ಸಮಾವೇಶ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ' ಎಂದು ಹೇಳಿದರು‌

'ಪ್ರಧಾನಿ ಮೋದಿ ಅವರಿಂದ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ. ಸಂವಿಧಾನಕ್ಕೆ ಅಪಮಾನವಾಗಿದೆ. ಕೋರ್ಟ್ ತೀರ್ಪಿನ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ನ್ಯಾಯಾಲಯದ ಆದೇಶ ಪ್ರತಿ ಸಿಕ್ಕುವ ಮುನ್ನವೇ ಅನರ್ಹಗೊಳಿಸಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಅಪಮಾನ‌ವಾಗಿದೆ. ವಯನಾಡಿನಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಭಾರತ್ ಜೋಡೊ ಯಾತ್ರೆಯಲ್ಲಿ ಲಭಿಸಿದ ಬೆಂಬಲದಿಂದ ಬಿಜೆಪಿ ಭಯಭೀತವಾಗಿದೆ' ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT