ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಯುವಕ್ರಾಂತಿ’ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯಕ್ಕೆ ಆಗಮಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರನ್ನು ಹಾರ ಹಾಕಿ ಸ್ವಾಗತಿಸಿದ ವಿಡಿಯೊವನ್ನು ಹಂಚಿಕೊಂಡಿದ್ದಾರೆ.
‘ಯುವಕ್ರಾಂತಿ’ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯಕ್ಕೆ ಆಗಮಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ರಾಹುಲ್ ಗಾಂಧಿ ಅವರನ್ನು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಜತೆಗೆ ಖರ್ಗೆ ಇದ್ದಾರೆ. ಸಿದ್ದರಾಮಯ್ಯ, ಎಂಬಿ ಪಾಟೀಲ್ ಸೇರಿದಂತೆ ರಾಜ್ಯದ ಕಾಂಗ್ರೆಸ್‌ನ ಹಿರಿಯ ನಾಯಕರು ತಮ್ಮ ನಾಯಕನನ್ನು ಬರಮಾಡಿಕೊಂಡರು.
ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಇಂದು ‘ಯುವ ಕ್ರಾಂತಿ ರ್‍ಯಾಲಿ ನಡೆಯಲಿದೆ. ರಾಜ್ಯದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕರು ಬರಲಿದ್ದು, ಕಾರ್ಯಕ್ರಮಕ್ಕೆ ಭವ್ಯ ವೇದಿಕೆ ಸಿದ್ಧಪಡಿಸಲಾಗಿದೆ. 80 ಸಾವಿರಕ್ಕೂ ಅಧಿಕ ಜನರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.