ಶನಿವಾರ, ಅಕ್ಟೋಬರ್ 24, 2020
23 °C

ವಿವಿಧೆಡೆ ಮಳೆ: ಸಿಡಿಲು ಬಡಿದು ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದ ಹಲವು ಭಾಗದಲ್ಲಿ ಗುಡುಗು–ಸಿಡಿಲು ಸಹಿತ ಶನಿವಾರ ರಭಸದ ಮಳೆಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ತಾಯಿ, ಮಗಳು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ಮಹಾದೇವಿ ಭಜಂತ್ರಿ (40) ಹಾಗೂ ಅವರ ಮಗಳು ಸೋನಿ ಭಜಂತ್ರಿ (12) ಮತ್ತು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಅಶೋಕ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡು ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಗಾಳೆಪ್ಪ (50) ಮೃತಪಟ್ಟಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ ಒಂದೇ ದಿನದಲ್ಲಿ 14 ಸೆಂ.ಮೀ. ದಾಖಲೆಯ ಮಳೆಯಾಗಿದೆ. 2009ರಲ್ಲಿ 18‌ ಸೆಂ.‌ಮೀ ಮಳೆಯಾಗಿತ್ತು. ದಾವಣಗೆರೆ ಜಿಲ್ಲೆಯ ವಿವಿಧೆಡೆ ಸುರಿದ ಭಾರಿ ಮಳೆಗೆ ಮನೆ, ಗದ್ದೆಗಳಿಗೆ ನೀರು ನುಗ್ಗಿದೆ.

ಧಾರವಾಡ, ಬೆಳಗಾವಿ, ವಿಜಯಪುರ, ಹಾವೇರಿ ಹಾಗೂ ಬಳ್ಳಾರಿ, ಬಾಗಲಕೋಟೆ, ಕೊಡಗು, ಹಾಸನ, ಮಂಡ್ಯ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು