ಶನಿವಾರ, ಜುಲೈ 24, 2021
22 °C

ಮುಂಗಾರು:16 ಜಿಲ್ಲೆಗಳಲ್ಲಿ ಅಲರ್ಟ್‌ ಮುಂದುವರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜೂ.18ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಇದೇ 20ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೂ.16 ಮತ್ತು 17ರಂದು ‘ಆರೆಂಜ್ ಅಲರ್ಟ್‌’ ಮುಂದುವರಿಸಲಾಗಿದೆ.

ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ. ಕರಾವಳಿಯಲ್ಲಿ ಗಂಟೆಗೆ ಗರಿಷ್ಠ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಇದೇ 17ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದೂ ಎಚ್ಚರಿಸಿದೆ.

ಮಳೆ–ಎಲ್ಲಿ, ಎಷ್ಟು?: ಕೊಲ್ಲೂರಿನಲ್ಲಿ ಗರಿಷ್ಠ 12 ಸೆಂ.ಮೀ ಮಳೆಯಾಗಿದೆ. ಬೆಳ್ತಂಗಡಿ, ಸುಳ್ಯ 6, ವಿರಾಜಪೇಟೆ 3, ರಾಯಚೂರು, ಸಂಕೇಶ್ವರ, ಸೊರಬ, ಸಾಗರ, ಕೊಪ್ಪ 2, ಚಿಕ್ಕಮಗಳೂರು, ಚಿಂಚೋಳಿ, ಕಲಬುರ್ಗಿ, ಕಮಲಾಪುರ, ಧಾರವಾಡದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ವಿಜಯಪುರ ಹಾಗೂ ಮೈಸೂರಿನಲ್ಲಿ ತಲಾ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು