ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಮುಂದುವರಿಕೆ

Last Updated 21 ಸೆಪ್ಟೆಂಬರ್ 2020, 2:29 IST
ಅಕ್ಷರ ಗಾತ್ರ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ಸೆ.21 ರವರೆಗೆ ‘ರೆಡ್ ಅಲರ್ಟ್’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಬಿರುಸುಗೊಂಡಿರುವುದರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆ.23 ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ. ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಮಳೆ-ಎಲ್ಲಿ,ಎಷ್ಟು?: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಗರಿಷ್ಠ 39 ಸೆಂ.ಮೀ ಮಳೆ ಸುರಿದಿದೆ.

ಕಾರ್ಕಳ 28, ಉಡುಪಿ 27, ಮಂಗಳೂರು, ಆಗುಂಬೆ 22, ಮೂಡುಬಿದರೆ 19, ಭಾಗಮಂಡಲ 17, ಉಪ್ಪಿನಂಗಡಿ, ಪುತ್ತೂರು 15, ಸುಳ್ಯ 12, ಮಡಿಕೇರಿ 11, ಕುಂದಾಪುರ, ಕೊಪ್ಪ 10, ಅಂಕೋಲಾ 8, ವಿರಾಜಪೇಟೆ 7, ಅಥಣಿ 6, ಕಾರವಾರ, ಶಿರಾ 5, ಮೂಡಿಗೆರೆ, ಗುಬ್ಬಿ 4, ಚಿಂತಾಮಣಿ, ಭದ್ರಾವತಿ 3, ಭಟ್ಕಳ, ತರೀಕೆರೆ, ಬೆಳಗಾವಿ, ಬೆಂಗಳೂರು, ಬಾಗೇಪಲ್ಲಿ, ಶಿಡ್ಲಘಟ್ಟ 2, ತೀರ್ಥಹಳ್ಳಿ, ತಿಪಟೂರು, ಬೇಲೂರು, ದೊಡ್ಡಬಳ್ಳಾಪುರ, ಗೌರಿಬಿದನೂರು, ಬಂಗಾರಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT