ಬೆಂಗಳೂರು: ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ.2ರಿಂದ 5ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬುಧವಾರದಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇರುವುದರಿಂದ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.
ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆ ಸುರಿಯಬಹುದು.
ಮಳೆ-ಎಲ್ಲಿ, ಎಷ್ಟು?: ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಆನೇಕಲ್, ಮಳವಳ್ಳಿ 7, ಚಾಮರಾಜನಗರ 6, ಮಂಡ್ಯ, ತಿಪಟೂರು 5, ಮಾಲೂರು, ಮದ್ದೂರು 4, ರಾಮನಗರ 3, ಶಿರಾ, ಕೊಳ್ಳೇಗಾಲ, ಬೆಂಗಳೂರು, ವಿರಾಜಪೇಟೆ 2, ತುಮಕೂರು, ಹೊಸಕೋಟೆ, ಬಂಗಾರಪೇಟೆ, ಗುಬ್ಬಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.