ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಸಮೀಪ:19 ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ

Last Updated 31 ಮೇ 2021, 20:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ದಿನಗಣನೆ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ಜೂನ್ 1ರಿಂದ 3ರವರೆಗೆರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಎಲ್ಲ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಿಡಿಲು ಹೆಚ್ಚಾಗಲಿದೆ. ನೈರುತ್ಯ ಮುಂಗಾರು ಮಾರುತಗಳುಇದೇ 3ರ ನಂತರ ಕೇರಳ ಮಾರ್ಗವಾಗಿ ರಾಜ್ಯ ಪ್ರವೇಶಿಸಲಿವೆ. ಜೂನ್ ಮೊದಲ ವಾರಾಂತ್ಯದ ವೇಳೆಗೆ ರಾಜ್ಯದಲ್ಲಿ ಮುಂಗಾರು ಸುರಿಯಲಿದೆ’ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎಲ್ಲೆಲ್ಲಿ ಅಲರ್ಟ್‌?:ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಜೂ.1ರಿಂದ 3ರವರೆಗೂಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಮಳೆ–ಎಲ್ಲಿ, ಎಷ್ಟು?:ಕೋಲಾರ ಜಿಲ್ಲೆಯ ಶ್ರೀನಿವಾಸ‍ಪುರದಲ್ಲಿ ಸೋಮವಾರ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಧರ್ಮಸ್ಥಳ 7, ಕಾರವಾರ, ಸುಬ್ರಹ್ಮಣ್ಯ 5, ಕುಂದಾಪುರ, ಆಗುಂಬೆ 4, ಚಿಂತಾಮಣಿ 3, ಸಿದ್ದಾಪುರ, ಸುಳ್ಯ, ಬಂಗಾರಪೇಟೆ, ತೀರ್ಥಹಳ್ಳಿ 2, ಭಟ್ಕಳ, ಅಂಕೋಲಾ, ಹೊನ್ನಾವರ, ಮಡಿಕೇರಿ, ಮುಳಬಾಗಿಲು, ಕಡೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.ರಾಯಚೂರಿನಲ್ಲಿ38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT