ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.8 ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Last Updated 5 ಜನವರಿ 2021, 19:20 IST
ಅಕ್ಷರ ಗಾತ್ರ

ಬೆಂಗಳೂರು: ‘ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇದೇ 6ರಿಂದ 8ರವರೆಗೆ ಮಳೆಯಾಗುವ ಮುನ್ಸೂಚನೆಗಳಿವೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಚಳಿಗಾಲದಲ್ಲೂ ಸಾಮಾನ್ಯವಾಗಿಜನವರಿ ಮತ್ತು ಫೆಬ್ರುವರಿ ಅವಧಿಯಲ್ಲಿ ಪೂರ್ವ ದಿಕ್ಕಿನಿಂದ ಗಾಳಿ ಬೀಸುವುದರಿಂದ ಈ ಎರಡೂ ತಿಂಗಳಿನಲ್ಲಿ ಆಗಾಗ ಮಳೆ ಸುರಿಯುತ್ತದೆ.ಜನವರಿ 8ರಂದು ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, 9ರಿಂದ ಮಳೆದಿಢೀರ್‌ ತಗ್ಗಲಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

‘ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಬುಧವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯಾಗಬಹುದು’ ಎಂದು ಹೇಳಿದರು.

ಮಳೆ ಎಲ್ಲೆಲ್ಲಿ, ಎಷ್ಟು?: ಉತ್ತರ ಕನ್ನಡ ಜಿಲ್ಲೆಯ ಕಿರವತ್ತಿ ಹಾಗೂ ಹಳಿಯಾಲದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಬೈಲಹೊಂಗಲ 2, ಸಾಗರದಲ್ಲಿ 1 ಸೆಂ.ಮೀ ಮಳೆಯಾಗಿದೆ. ಬೀದರ್‌ನಲ್ಲಿ13.4 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ಹಾಗೂ ಕಾರವಾರದಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT