ಬುಧವಾರ, ಸೆಪ್ಟೆಂಬರ್ 28, 2022
26 °C
ಸೇತುವೆಗಳು ಮುಳುಗಡೆ

ಮಳೆ: ಹಳ್ಳದಲ್ಲಿ ಕೊಚ್ಚಿ ಹೋದ ಕಾರು, ಚಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದ ಹಲವೆಡೆ ಮಂಗಳವಾರ ಮಳೆ ಆರ್ಭ‌ಟಿಸಿದೆ. ಸೇತುವೆಗಳು ಮುಳುಗಡೆಯಾಗಿವೆ.  ಹೊಲ, ತೋಟಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಸಾತ್ಕೋಳಿ ಬಳಿ ಹಳ್ಳದ ಸೇತುವೆಯಲ್ಲಿ ಸಾಗುವಾಗ ಕಾರು ಕೊಚ್ಚಿ ಹೋಗಿ, ಕಾರಿನಲ್ಲಿದ್ದ ಕಡಹಿನಬೈಲಿನ ಅರಶಿನಗೆರೆಯ ಪ್ರಸನ್ನ (50) ಮೃತಪಟ್ಟಿದ್ದಾರೆ.

ಗದಗ ಜಿಲ್ಲೆಯಲ್ಲಿ ಕಟಾವಿಗೆ ಬಂದಿದ್ದ 73 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿನ ಹೆಸರು ಬೆಳೆ ಹಾನಿಯಾಗಿದೆ. 

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಭಾರಿ ಹೆಚ್ಚಳವಾಗಿರುವುದರಿಂದ ವಿಜಯನಗರ–ಬಳ್ಳಾರಿಯಲ್ಲಿ ಮೂರು ಸೇತುವೆಗಳು ಮುಳುಗಿ, ಸಂಪರ್ಕ ಕಡಿತಗೊಂಡಿದೆ.

ಮಡಿಕೇರಿ- ಮಂಗಳೂರು ರಸ್ತೆಯಲ್ಲಿ ಮದೆನಾಡು ಸಮೀಪ ಗುಡ್ಡದಲ್ಲಿ ದೊಡ್ಡ ಪ್ರಮಾಣದ ಬಿರುಕು ಕಾಣಿಸಿಕೊಂಡು ಆತಂಕ ಮೂಡಿಸಿದೆ.

ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಟ್ಟಿರುವ ಕಾರಣ ಗಂಗಾವತಿ–ಕಂಪ್ಲಿ ಸಂಪರ್ಕ ಕಲ್ಪಿ
ಸುವ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ನವವೃಂದಾವನ ಜನ ಸಂಪರ್ಕ ಕಳೆದುಕೊಂಡಿದೆ. ತುಂಗಭದ್ರಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು