ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’: ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸಾಧ್ಯತೆ

Last Updated 10 ನವೆಂಬರ್ 2021, 19:54 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಆಗುವ ಸಾಧ್ಯತೆ ಇರುವುದರಿಂದ ನ.11ರಂದು ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವುತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳ ಕರಾವಳಿ ಕಡೆಗೆ ಗುರುವಾರ ಬರಲಿದೆ. ಇದರ ಪ್ರಬಲತೆಯೂ ಹೆಚ್ಚಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಹೆಚ್ಚಾಗಿದೆ. ಎರಡು ದಿನಗಳ ನಂತರ ಇದರ ಪ್ರಬಲತೆ ತಗ್ಗಿ, ಮಳೆ ಕಡಿಮೆಯಾಗಲಿದೆ’ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ವಿವರಿಸಿದರು.

‘ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೆ ಮಳೆಯ ಸೂಚನೆಗಳಿಲ್ಲ. ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು’ ಎಂದರು.

16 ಜಿಲ್ಲೆಗಳಲ್ಲಿ ಅಲರ್ಟ್‌: ಗುರುವಾರ (ನ.11) ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್‌’ ಹಾಗೂ ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ವಿಜಯಪುರದಲ್ಲಿ 12 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT