ಮಂಗಳವಾರ, ಜನವರಿ 19, 2021
27 °C

ಕರಾವಳಿ ಸೇರಿ ವಿವಿಧೆಡೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಬಳ್ಳಾರಿ ಹಾಗೂ ಮೈಸೂರು ಭಾಗದ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.

ಮೈಸೂರು ಜಿಲ್ಲೆಯ ಪಿರಿಯಾ ಪಟ್ಟಣ, ಸರಗೂರಿನಲ್ಲಿ ಬಿರುಸಿನ ಮಳೆಯಾಗಿದೆ. ಕೊಡಗು ಜಿಲ್ಲೆಯ ನಾಗರಹೊಳೆ ಸುತ್ತಮುತ್ತ ಉತ್ತಮ ಮಳೆ ಯಾಗಿದೆ. ಮಡಿಕೇರಿಯೂ ಸೇರಿದಂತೆ ಉಳಿದೆಡೆ ತುಂತುರು ಮಳೆಯಾಗಿದೆ.

ಹಾಸನ ಜಿಲ್ಲೆಯಾದ್ಯಂತ, ಚಾಮ ರಾಜನಗರ ಹಾಗೂ ಮಂಡ್ಯ ಜಿಲ್ಲೆಯ ವಿವಿಧೆಡೆ ತುಂತುರು ಮಳೆಯಾಗಿದೆ.

ಹೊಸಪೇಟೆಯಲ್ಲಿ ಹಾಗೂ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ, ತುಮ್ಮಿನಕಟ್ಟಿ, ಹಂಸಭಾವಿ ಸುತ್ತಮುತ್ತ ಮಂಗಳವಾರ ಸಂಜೆ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಗುಡುಗು ಸಿಡಿಲು ಹಾಗೂ ಭಾರಿ ಗಾಳಿಯೊಂದಿಗೆ ಮಳೆ ಸುರಿಯಿತು.

ನಗರವೂ ಸೇರಿದಂತೆ ಮಂಗಳೂರು ಮತ್ತು ಬಂಟ್ವಾಳ ತಾಲ್ಲೂಕಿನಲ್ಲಿ ಕೆಲ ಹೊತ್ತು ಮಳೆ ಸುರಿಯಿತು. ‍ಪುತ್ತೂರು, ಸುಳ್ಯ, ಬೆಳ್ತಂಗಡಿಯಲ್ಲಿ ತುಂತುರು ಮಳೆಯಾಗಿದೆ. ದಾವಣಗೆತರೆ ಜಿಲ್ಲೆಯ ಕೆಲವೆಡೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕೆಲವೆಡೆ ಮಳೆಯಾಯಿತು.

ಮೂಡಿಗೆರೆ ತಾಲ್ಲೂಕಿನಾದ್ಯಂತ ಮಂಗಳವಾರ ಸಾಧಾರಣ ಸುರಿದಿದೆ. ಸೋಮವಾರ ತಡರಾತ್ರಿ ತುಂತುರು ಮಳೆಯಾಗಿತ್ತು. ಕಳಸ ಪಟ್ಟಣ ಮತ್ತು ಆಸುಪಾಸಿನ ಪ್ರದೇಶದಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು, ತರೀ
ಕೆರೆಯಲ್ಲಿ ತುಂತುರು ಮಳೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು