ಭಾನುವಾರ, ಮೇ 16, 2021
29 °C

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಸಿಡಿಲು ಬಡಿದು ನಾಲ್ವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದ ಹಲವೆಡೆ ಶನಿವಾರ ಮಳೆಯಾಗಿದ್ದು, ಸಿಡಿಲು ಬಡಿದು ನಾಲ್ವರು ಸಾವಿಗೀಡಾಗಿದ್ದಾರೆ.

ಸಿಡಿಲು ಬಡಿದು ಕಲಬುರ್ಗಿ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮತ್ತು ಬೀದರ್‌ ಜಿಲ್ಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ.

ಅಫಜಲಪುರ ತಾಲ್ಲೂಕಿನ ಬಡದಾಳ ಗ್ರಾಮದ ವ್ಯವಸಾಯ ಸಹಕಾರ ಸಂಘದ ನಿರ್ದೇಶಕ ಭೋಜರಾಜ ಅತನೂರ (54) ಹೂಲದಲ್ಲಿ ಕೃಷಿ ಚಟುವಟಿಕೆ ಮಾಡುವ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಔರಾದ್ ತಾಲ್ಲೂಕಿನ ಮೆಡಪಳ್ಳಿ ಗ್ರಾಮದಲ್ಲಿ ಹೊಲದಿಂದ ಮನೆಗೆ ಬರುವಾಗ ಸಿಡಿಲು ಬಡಿದು ಅನಿತಾ ಬಸಯ್ಯ ಸ್ವಾಮಿ (35) ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಂಚಿನಾಳ ಗ್ರಾಮದ ಹೊಲವೊಂದರಲ್ಲಿ ಶನಿವಾರ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಕುರಿ ಮೇಯಿಸುತ್ತಿದ್ದ ಕೊಡ್ಲಿವಾಡದ ಹನಮಂತ ಕಾರಬಾರಿ (19), ಮಾಡಮಗೇರಿ ಗ್ರಾಮದ ಹೊನ್ನಪ್ಪ ಮಬನೂರ (14) ಮೃತರು. ಎರಡು ಕುರಿಗಳೂ ಮೃತಪ‍ಟ್ಟಿವೆ. 

ಹಾವೇರಿಯ ಹತ್ತರಗೇರಿ ಓಣಿಯಲ್ಲಿರುವ ಸಾವಳಗಿ ಮಠದ ಸಮೀಪ ಮೂರು ತೆಂಗಿನ ಮರಗಳಿಗೆ ಸಿಡಿಲು ಬಡಿದಿದೆ. ಹುಬ್ಬಳ್ಳಿಯಲ್ಲಿ ಮನೆ ಗೋಡೆ ಕುಸಿದಿದೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು