ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 25ರಂದು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಇದೇ 27ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿದ್ದು, 3.7 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸೂಚನೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಒಳನಾಡಿನಲ್ಲಿ ಇದೇ 26ರ ನಂತರ ಮಳೆ ಪ್ರಮಾಣ ತಗ್ಗಲಿದೆ. ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.