ಮಂಗಳವಾರ, ಸೆಪ್ಟೆಂಬರ್ 28, 2021
21 °C

ಕೊಡಗಿನಲ್ಲಿ ಮತ್ತೆ ಮಳೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಐದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ಮುಂಗಾರು ಮಳೆ ಶನಿವಾರ ಮಧ್ಯಾಹ್ನದ ಬಳಿಕ ಮತ್ತೆ ಆರಂಭವಾಗಿದೆ.

ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಡಿಕೇರಿ, ಚೇರಂಬಾಣೆ, ಬಕ್ಕ, ನಾಪೋಕ್ಲು, ತಲಕಾವೇರಿ ಭಾಗದಲ್ಲೂ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳೂ ಗರಿಗೆದರಿವೆ. ಭತ್ತದ ನಾಟಿ ಕಾರ್ಯಕ್ಕೆ ರೈತರು ಸಸಿ ಮಡಿಯ ಸಿದ್ಧತಾ ಕಾರ್ಯದಲ್ಲಿ ತೊಡಗಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು