ಶನಿವಾರ, ಜನವರಿ 22, 2022
16 °C

ನ.23ರಿಂದ ಮಳೆ ತಗ್ಗುವ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ತಮಿಳುನಾಡಿನ ಒಳನಾಡಿನಲ್ಲಿದ್ದ ವಾಯುಭಾರ ಕುಸಿತ ದುರ್ಬಲಗೊಂಡಿದ್ದು, ಮೇಲ್ಮೈ ಸುಳಿಗಾಳಿ ಸಕ್ರಿಯವಾಗಿದೆ. ಇದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನ.21ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇಲ್ಮೈ ಸುಳಿಗಾಳಿಯ ತೀವ್ರತೆ ತಗ್ಗಲಿರುವುದರಿಂದ ಮುಂದಿನ ಎರಡು ದಿನಗಳವರೆಗೆ ಮಾತ್ರ ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ನ.23ರಿಂದ ಉತ್ತರ ಒಳನಾಡಿನಲ್ಲಿ ಮಳೆ ತಗ್ಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾನುವಾರ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ  ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಮಳೆ–ಎಲ್ಲಿ, ಎಷ್ಟು?: ಹಾವೇರಿ ಜಿಲ್ಲೆಯ ಕೆಲವರಕೊಪ್ಪ ಭಾಗದಲ್ಲಿ ಶನಿವಾರ 19 ಸೆಂ.ಮೀ ಗರಿಷ್ಠ ಮಳೆಯಾಗಿದೆ.

ಮಂಗಳೂರು, ಕಡೂರು, 16, ಹಾನಗಲ್ 13, ಹಿರೇಕೆರೂರು 9, ಶಿಡ್ಲಘಟ್ಟ 8, ಮದ್ದೂರು, ಬಂಗಾರಪೇಟೆ 7, ಹಾವೇರಿ, ಮಧುಗಿರಿ 6, ಕೋಲಾರ 5, ಸುಳ್ಯ, ಚಿತ್ರದುರ್ಗ, ದಾವಣಗೆರೆ, ಕಂಪ್ಲಿ 4, ಕಾರವಾರ, ಭಟ್ಕಳ, ಚಿಂತಾಮಣಿ, ಗುಡಿಬಂಡೆ, ಹಿರಿಯೂರು, ಮಾಲೂರು, ಸಾಗರ, ಶಿರಾ 3, ಮೂಡುಬಿದರೆ, ಮಾನ್ವಿ, ಗಂಗಾವತಿ, ಗದಗ, ಕೊಪ್ಪಳ, ನರಗುಂದ, ಗೌರಿಬಿದನೂರು, ತೊಂಡೆಬಾವಿ, ‍ಪಾವಗಡ, ತಿಪಟೂರು, ಹೊಸಕೋಟೆ, ದೊಡ್ಡಬಳ್ಳಾಪುರ 2, ಪುತ್ತೂರು, ಕಾರ್ಕಳ, ಬಾಗಲಕೋಟೆ, ಹುಕ್ಕೇರಿ, ಚಿಕ್ಕೋಡಿ, ನೆಲಮಂಗಲ, ಶಿವಮೊಗ್ಗ, ಶ್ರೀರಂಗಪಟ್ಟಣ, ಮಂಡ್ಯ, ಚನ್ನಪಟ್ಟಣ, ಮಡಿಕೇರಿ, ಹಾಸನ, ಭದ್ರಾವತಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು