ಶುಕ್ರವಾರ, ಸೆಪ್ಟೆಂಬರ್ 17, 2021
22 °C
ಮೂವರ ಸಾವು: ಹಲವೆಡೆ ಭೂಕುಸಿತ

ತಗ್ಗಿದ ಮಳೆ, ತಪ್ಪದ ಪ್ರವಾಹ ಭೀತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಮಳೆ ಅಬ್ಬರ ತಗ್ಗಿದೆ. ಆದರೆ, ಬೆಳಗಾವಿ, ಬಾಗಲಕೋಟೆ, ಉತ್ತರಕನ್ನಡ, ಗದಗ, ಹಾವೇರಿ, ವಿಜಯಪುರ, ಶಿವಮೊಗ್ಗ ಜಿಲ್ಲೆ ಗಳಲ್ಲಿ ನದಿಗಳಿಗೆ ಹೆಚ್ಚಿನ ನೀರು ಹರಿದುಬರುತ್ತಿರುವುದು ಮತ್ತು ಜಲಾಶಯಗ ಳಿಂದ ಹೊರಹರಿವಿನ ಪ್ರಮಾಣ ಏರಿಕೆಯಾಗಿರುವ ಪರಿಣಾಮ ತೀರದ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ.

ಮಳೆಯಿಂದಾಗಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ರಾಜ್ಯದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಹೊಳೆಹೊನ್ನೂರಿನಿಂದ ಹೊಳೆಭೈರನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಗೆ ಅಡ್ಡಲಾಗಿ ಹರಿಯುವ ಹಳ್ಳದಲ್ಲಿ ಮಹಿಳೆಯೊಬ್ಬರು ಮತ್ತು ಉತ್ತರ ಕನ್ನಡ ಜಿಲ್ಲೆಯ ಹಾಸಣಗಿ ಗ್ರಾಮದ ಆಲವಾಡದ ಕಬ್ಬಿನಗದ್ದೆ ಸೇತುವೆ ದಾಟುತ್ತಿದ್ದ ಆನಂದ ನಾಗಾ ಮೋಗೇರ ಎಂಬುವವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಖಾನಾಪುರ ತಾಲ್ಲೂಕಿನ ಲೋಂಡಾ ಸಮೀಪ ರಾಷ್ಟ್ರೀಯ ಹೆದ್ದಾರಿ–4ಎರ ಸೇತುವೆ ಕುಸಿದಿದ್ದು, ಬೆಳಗಾವಿ–ಉತ್ತರ ಕನ್ನಡ ಜಿಲ್ಲೆಗಳ ಸಂಪರ್ಕ ಕಡಿತಗೊಂಡಿದೆ. ಬೆಳಗಾವಿ, ಚಿಕ್ಕಮಗಳೂರು ಸೇರಿ ದಂತೆ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಬೆಳೆಗಳಿಗೆ ಅಪಾರ ಹಾನಿಯಾಗಿದೆ.ಕೊಡಗಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಮಡಿಕೇರಿ–ಸೋಮ ವಾರಪೇಟೆ ರಾಜ್ಯ ಹೆದ್ದಾರಿಯ ಹಟ್ಟಿಹೊಳೆ ಎಂಬಲ್ಲಿ ರಸ್ತೆ ಬಿರುಕು ಬಿಟ್ಟಿದ್ದು, ಬೃಹತ್‌ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು