ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳು ಜಿಲ್ಲೆಗಳಲ್ಲಿ ಎರಡು ದಿನ ‘ರೆಡ್ ಅಲರ್ಟ್’

Last Updated 19 ಸೆಪ್ಟೆಂಬರ್ 2020, 16:47 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸೆ.20 ಮತ್ತು 21ರಂದು ‘ರೆಡ್ ಅಲರ್ಟ್’ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆ.23ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಮಳೆ-ಎಲ್ಲಿ,ಎಷ್ಟು?: ಮಂಗಳೂರು ವಿಮಾನ ನಿಲ್ದಾಣ ಹಾಗೂ ರಾಯಚೂರಿನಲ್ಲಿ ತಲಾ 8 ಸೆಂ.ಮೀ ಮಳೆಯಾಗಿದೆ. ಮೂಡುಬಿದರೆ, ಭಾಗಮಂಡಲ 5, ಉಡುಪಿ 4, ಪುತ್ತೂರು, ಉಪ್ಪಿನಂಗಡಿ 3, ಸುಳ್ಯ, ಕುಂದಾಪುರ, ಭಟ್ಕಳ, ಕಾರವಾರ 2, ಕಂಪ್ಲಿ, ಮೊಳಕಾಲ್ಮುರು, ಸೋಮವಾರಪೇಟೆ ಹಾಗೂ ಶೃಂಗೇರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT