ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಒಳನಾಡಿನಲ್ಲಿ 2 ದಿನ ಭಾರಿ ಮಳೆ

Last Updated 27 ಸೆಪ್ಟೆಂಬರ್ 2020, 3:26 IST
ಅಕ್ಷರ ಗಾತ್ರ

ಬೆಂಗಳೂರು: ಮುಂಗಾರು ಬಿರುಸುಗೊಂಡಿರುವುದರಿಂದ ರಾಜ್ಯದ ಉತ್ತರ ಒಳನಾಡಿನಲ್ಲಿ ಸೆ.27 ಮತ್ತು 28ರಂದು ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆ ದಿಢೀರ್ ತಗ್ಗಿದೆ. ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾನುವಾರ
ದಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.

ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದ್ದು, ಮುಂದಿನ ಮೂರು ದಿನ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಯಚೂರು, ಕೊಪ್ಪಳ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮಳೆ-ಎಲ್ಲಿ, ಎಷ್ಟು?: ಯಾದಗಿರಿ ಜಿಲ್ಲೆಯ ಭೀಮರಾಯನಗುಡಿಯಲ್ಲಿ ಗರಿಷ್ಠ 16 ಸೆಂ.ಮೀ ಮಳೆಯಾಗಿದೆ. ಕಲಬುರ್ಗಿ 8, ಹುನಗುಂದ 7, ನರಗುಂದ, ವಿಜಯಪುರ, ಬೀದರ್ 6, ಚಿಂಚೋಳಿ, ರಾಯಚೂರು, ಕೊಪ್ಪಳ 5, ಚಿಂತಾಮಣಿ 4, ಕಾರವಾರ, ಸಂಕೇಶ್ವರ, ಕುಂದಗೋಳ, ಗದಗ, ಕಮಲಾಪುರ 3, ಕುಂದಾಪುರ, ಅಂಕೋಲಾ, ಬೈಲಹೊಂಗಲ, ಚಿಕ್ಕೋಡಿ, ಹುಕ್ಕೇರಿ, ಧಾರವಾಡ, ವಿರಾಜಪೇಟೆ, ಕೋಲಾರ 2, ಬೆಳಗಾವಿ, ನಿಪ್ಪಾಣಿ, ಅಥಣಿ, ಮಡಿಕೇರಿ, ಹೊಸಕೋಟೆ ಹಾಗೂ ಶಿಡ್ಲಘಟ್ಟದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT