ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ಜಿಲ್ಲೆಗಳಲ್ಲಿ ಇಂದು 'ಯೆಲ್ಲೊ ಅಲರ್ಟ್'

Last Updated 28 ಸೆಪ್ಟೆಂಬರ್ 2020, 20:15 IST
ಅಕ್ಷರ ಗಾತ್ರ

ಬೆಂಗಳೂರು: 'ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸೆ.29ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ' ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

'ಈ ಭಾಗದ ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಗಳವಾರ 'ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ' ಎಂದರು.

'ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿರುವುದರಿಂದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಎರಡು ದಿನಗಳಿಂದ ಮಳೆ ತಗ್ಗಿದೆ. ಮುಂದಿನ 48 ಗಂಟೆಗಳಲ್ಲಿ ಕೆಲವೆಡೆ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಅ.1 ಮತ್ತು 2ರಂದು ಸಾಧಾರಣ ಮಳೆಯಾಗಬಹುದು' ಎಂದು ಮಾಹಿತಿ ನೀಡಿದರು.

ಮಳೆ-ಎಲ್ಲಿ,ಎಷ್ಟು?: ಕೊಪ್ಪಳ ಜಿಲ್ಲೆಯ ಬೇವೂರಿನಲ್ಲಿ ಗರಿಷ್ಠ 5 ಸೆಂ.ಮೀ ಮಳೆಯಾಗಿದೆ. ಬಾದಾಮಿ 4, ಯಲಬುರ್ಗಾ, ರಾಮದುರ್ಗ 3, ಕೂಡ್ಲಿಗಿ, ಹುನಗುಂದ 2, ವಿಜಯಪುರ, ಹರಪನಹಳ್ಳಿ, ಆಗುಂಬೆ ಹಾಗೂ ಹೊಸಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT