ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

22 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Last Updated 2 ಸೆಪ್ಟೆಂಬರ್ 2020, 20:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಸೆ.3ರಿಂದ 5ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆ ಇರುವುದರಿಂದ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಮಳೆ-ಎಲ್ಲಿ, ಎಷ್ಟು?: ಬೇಲೂರಿನಲ್ಲಿ 11 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಹಾಸನ 9, ತೀರ್ಥಹಳ್ಳಿ 8, ಪಾಂಡವಪುರ 5, ಸುಳ್ಯ, ರಾಮನಗರ 4, ಭಾಗಮಂಡಲ, ಚಾಮರಾಜನಗರ, ದೇವನಹಳ್ಳಿ, ಚನ್ನಪಟ್ಟಣ 3, ಪುತ್ತೂರು, ಹಾವೇರಿ, ತಿಪಟೂರು, ಮಧುಗಿರಿ, ಚಿಕ್ಕಬಳ್ಳಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT