ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ

Last Updated 26 ಮಾರ್ಚ್ 2022, 4:06 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳಲ್ಲಿಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ, ಹಾಸನ, ಮೈಸೂರು, ತುಮಕೂರು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆಯಾಗಲಿದೆ. ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು ಗುಡುಗು ಸಹಿತ ಮಳೆಯಾಗಲಿದೆ.

ಭಾರತದ ದಕ್ಷಿಣ ರಾಜ್ಯಗಳಾದ ಕೇರಳ, ಆಂಧ್ರ, ತಮಿಳುನಾಡು, ಕರ್ನಾಟಕ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಮುಂದಿನ ವಾರದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT