ಶುಕ್ರವಾರ, ಸೆಪ್ಟೆಂಬರ್ 30, 2022
26 °C

ವಿಧಾನಸೌಧದ ಕ್ಯಾಂಟೀನ್‌ಗೂ ನುಗ್ಗಿದ ಮಳೆ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾನುವಾರ ರಾತ್ರಿ ಸುರಿದ ಮಳೆಗೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ಪಕ್ಕದಲ್ಲಿರುವ ಕ್ಯಾಂಟೀನ್‌ಗೂ ನೀರು ನುಗ್ಗಿದೆ. ಕ್ಯಾಂಟೀನ್‌ನಲ್ಲಿ ಸುಮಾರು ಮೂರು ಅಡಿಗಳಿಗೂ ಹೆಚ್ಚು ನೀರು ನಿಂತಿತ್ತು ಎಂದು ಸಿಬ್ಬಂದಿ ತಿಳಿಸಿದರು.

ಸೋಮವಾರ ಸಿಬ್ಬಂದಿ ನೀರು ತೆಗೆಯಲು ಹರಸಾಹಸ ಮಾಡಿದರು.

ಭಾನುವಾರ ರಾತ್ರಿ ಪೂರ್ತಿ ಸುರಿದಿದ್ದು, ನಗರದಲ್ಲಿ 140 ಮಿ.ಮೀ. ಮಳೆಯಾಗಿದೆ. ಭಾರಿ ಮಳೆಯಿಂದ ರಸ್ತೆಗಳು ಹೊಳೆಯಂತಾಗಿವೆ. ಪೂರ್ವಭಾಗದಲ್ಲಿನ ಬಡಾವಣೆಗಳು ಕೆರೆಗಳಂತಾಗಿದ್ದು, ಕೆರೆಗಳ ಕೋಡಿ ಹರಿದು ಹೋಗಲು ಜಾಗವಿಲ್ಲದ ಕಾರಣ ಮಳೆ ನಿಂತರೂ ಬಡಾವಣೆಗಳಿಗೆ ನೀರು ನುಗ್ಗುವುದು ನಿಂತಿಲ್ಲ. ರಸ್ತೆಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳ ದಟ್ಟಣೆ ಇತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು