ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಶಕ್ತಿ ಯೋಜನೆ ಶೀಘ್ರವೇ ಜಾರಿ: ಕೃಷಿ ಸಚಿವ ಬಿ.ಸಿ.ಪಾಟೀಲ

Last Updated 26 ಆಗಸ್ಟ್ 2022, 20:57 IST
ಅಕ್ಷರ ಗಾತ್ರ

ಬೆಂಗಳೂರು: 2022–23 ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಕೃಷಿ ಯಾಂತ್ರೀಕರಣದಡಿ ಡೀಸೆಲ್‌ಗೆ ಸಹಾಯಧನ ನೀಡುವ ‘ರೈತ ಶಕ್ತಿ’ ಯೋಜನೆಯನ್ನು ಸದ್ಯವೇ ಜಾರಿಗೊಳಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ಈ ಯೋಜನೆಯಡಿ ರೈತರಿಗೆ ಒಂದು ಎಕರೆಗೆ ₹250 ರಂತೆ ಗರಿಷ್ಠ ಐದು ಎಕರೆಗೆ ಒಟ್ಟು ₹1,250 ಡಿಬಿಟಿ ಮೂಲಕ ಸಹಾಯಧನ ಪಾವತಿಸಲಾಗುವುದು. ಇದರಿಂದ ಕೃಷಿ ಉಪಕರಣಗಳ ಮೂಲಕ ಆಹಾರ ಧಾನ್ಯಗಳ ಉತ್ಪಾದಕತೆಯನ್ನು ಹೆಚ್ಚಿಸಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದಕ್ಕಾಗಿ ರೈತರು ನೋಂದಣಿಗಾಗಿ ಇರುವ
( FRUITS) ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಬೇಕು. ಕಿಸಾನ್‌ ತಂತ್ರಾಂಶದ ಮೂಲಕ ಹಣವನ್ನು ರೈತರ ಸೀಡೆಡ್‌ ಬ್ಯಾಂಕ್‌ ಅಥವಾ ಅಂಚೆ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಾಗುವುದು. ಈ ಯೋಜನೆಗೆ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯ ಇಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT