ಶನಿವಾರ, ಜನವರಿ 23, 2021
26 °C

ರೈತರ ಹೋರಾಟ ಬೆಂಬಲಿಸಿ ರಾಜಭವನ ಚಲೋ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಜ. 20 ರಂದು ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ ನಡೆಸಲಾಗುವುದು ಎಂದು ವಿರೋದ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಬ್ ಕಾ ಸಾಥ್ ಸಬ್ ಕಾ ವಿಕಾಸ ಅಂತ ಹೇಳಿ ಯಾಮಾರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವುದು ಒಂದು ಮಾಡುವುದು ಒಂದು. ಅವರದು ದ್ವಂದ್ವ ನಿಲುವು ಎಂದು ಮೂದಲಿಸಿದರು.

ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಈಗಲೂ ಸ್ಪಷ್ಟತೆ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಹಿ ಸುದ್ದಿ ಕೊಡುತ್ತೇವೆ ಎಂದಿದ್ದಾರೆ. ಈ ಬಗ್ಗೆ ಹೈಕಮಾಂಡ್ ಏನಾದರೂ ಹೇಳಿದೆಯಾ ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುತ್ತೇವೆ ಎಂದು ಆರ್‌ಎಸ್‌ಎಸ್‌ನವರೇ ನನಗೆ ಹೇಳಿದ್ದಾರೆ. ಆರ್‌ಎಸ್‌ಎಸ್‌ ಹಾಗೂ ಉಳಿದ ಪಕ್ಷದಲ್ಲೂ ನನಗೆ ಸ್ನೇಹಿತರಿದ್ದಾರೆ ಎಂದರು.

ಬಿಜೆಪಿ ಸರ್ಕಾರ ಶೇ 30 ಪರ್ಸಟ್ ಸರ್ಕಾರ. ಹಣ‌ಕೊಡದೇ  ಯಾವುದೇ ಕಡತ ವಿಲೇವಾರಿ ಆಗುವುದಿಲ್ಲ. ಎನ್ ಒಸಿ ಹಾಗೂ ಯೋಜನೆಗಳಿಗೆ ಅನುಮೋದನೆ ಸಿಗುವುದಿಲ್ಲ. ನಮ್ಮ ಸರ್ಕಾರದಲ್ಲಿ ಯಾವುದೇ ಹಗರಣ ಆಗಿದ್ದರೆ‌ ತೋರಿಸಲಿ ಎಂದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು