ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ರಾಜಭವನ ಚಲೋ: ಸಂಚಾರ ದಟ್ಟಣೆ

ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ
Last Updated 20 ಜನವರಿ 2021, 6:26 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ರಾಜಭವನ ಚಲೋ ರ‍್ಯಾಲಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ರೈತರು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದಾರೆ.

ಹೀಗಾಗಿ, ಬೆಂಗಳೂರು–ಮೈಸೂರು ಹೆದ್ದಾರಿ, ಆನಂದರಾವ್‌ ವೃತ್ತ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಸೇರಿದಂತೆ ಹಲವೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಪಕ್ಷದ ಪ್ರಮುಖ ನಾಯಕರು ಪ್ರತಿಭಟನಾ ರ‍್ಯಾಲಿಯಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಮೆಜೆಸ್ಟಿಕ್ ಬಳಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮುಂಭಾಗದಿಂದ ಮೆರವಣಿಗೆಯಲ್ಲಿ ತೆರಳಿ ಫ್ರೀಡಂ ಪಾರ್ಕ್‌ ತಲುಪಿ ಅಲ್ಲಿ ಪ್ರತಿಭಟನಾ ಸಭೆ ನಡೆಸಿದ ಬಳಿಕ ರಾಜಭವನದತ್ತ ತೆರಳಲು ಸಿದ್ಧತೆ ನಡೆದಿದೆ. ಫ್ರೀಡಂ ಪಾರ್ಕ್ ಸುತ್ತಮುತ್ತ 500ಕ್ಕೂ ಪೊಲೀಸರನ್ನು ನಿಯೋಜಿಸಲಾಗಿದ್ದು, ಭಾರಿ ಭದ್ರತೆ ಒದಗಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಮುಖಂಡರು ಮಾಹಿತಿ ಪ್ರಕಾರ ಹತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯಲ್ಲೂ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲು ಪೊಲೀಸ್‌ ಸಿಬ್ಬಂದಿಗೆ ಸೂಚಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನ ಸಮೀಪವೇ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ರಾಜಭವನ ಚಲೊ ರ‍್ಯಾಲಿಗೆ ಇಲ್ಲಿಯೇ ತಡೆಯೊಡ್ಡುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನಿಲುವು ಖಂಡಿಸಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಅತ್ಯಂತ ಪ್ರಮುಖ ಹೋರಾಟ ಇದಾಗಿದ್ದು, ಇದನ್ನು ವ್ಯವಸ್ಥಿತವಾಗಿ ನಿಯಂತ್ರಿಸಲು ಪೊಲೀಸ್ ಇಲಾಖೆಯನ್ನು ರಾಜ್ಯ ಸರ್ಕಾರ ಬಳಸಿಕೊಳ್ಳುತ್ತಿದೆ’ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾಂಗ್ರೆಸ್‌ ನಾಯಕರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT