ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ: ಎರಡು ಗಂಟೆ ತಡವಾಗಿ ಮತ ಎಣಿಕೆ

Last Updated 10 ಜೂನ್ 2022, 14:08 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಎರಡು ಗಂಟೆ ತಡವಾಗಿ ಆರಂಭವಾಗಿದೆ.

ಜೆಡಿಎಸ್‌ನ ಎಚ್‌.ಡಿ.ರೇವಣ್ಣ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಮತ ತೋರಿಸಿದರು ಎಂಬ ಕಾರಣಕ್ಕೆ ಅವರ ಮತವನ್ನು ಅಸಿಂಧುಗೊಳಿಸಬೇಕು ಎಂದು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಚುನಾವಣಾಧಿಕಾರಿ ಮತವನ್ನು ಸಿಂಧುಗೊಳಿಸಿದರೂ ಸಮಾಧಾನಗೊಳ್ಳದ ಕಾಂಗ್ರೆಸ್‌ ಪಕ್ಷ, ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ಆಯೋಗವು ಅಭಿಪ್ರಾಯವನ್ನು ನೀಡುವವರೆಗೆ ಮತಗಳ ಎಣಿಕೆಯನ್ನು ತಡೆ ಹಿಡಿಯಲಾಗಿತ್ತು.

ಕೇಂದ್ರ ಚುನಾವಣಾ ಆಯೋಗ ಮತವನ್ನು ಸಿಂಧುಗೊಳಿಸಿದ ಬಳಿಕ ಮತ ಎಣಿಕೆ ಆರಂಭಿಸಲಾಯಿತು. ಇನ್ನು ಕೆಲವೇ ನಿಮಿಷಗಳಲ್ಲಿ ಫಲಿತಾಂಶ ಹೊರ ಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT