ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ: ಬಿಜೆಪಿ 3ನೇ ಅಭ್ಯರ್ಥಿಯಾಗಿ ಲಹರ್ ಸಿಂಗ್ ಸಿರೋಯ

Last Updated 30 ಮೇ 2022, 19:36 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲಹರ್ ಸಿಂಗ್ ಸಿರೊಯ ಕಣಕ್ಕಿಳಿಸಲಲು ನಿರ್ಧರಿಸಲಾಗಿದೆ.

ಒಂದು ಕಾಲದಲ್ಲಿ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಲಹರ್ ಸಿಂಗ್ , ವಿಧಾನ ಪರಿಷತ್ತಿನ ಸದಸ್ಯರೂ ಆಗಿದ್ದರು. ಬಿಜೆಪಿ ರಾಜ್ಯ ಘಟಕದ ಖಜಾಂಜಿಯಾಗಿಯೂ ಕೆಲಸ ಮಾಡಿದ್ದರು

ರಾಜ್ಯಸಭೆ ಚುನಾವಣೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ನಿರೀಕ್ಷೆಯಂತೆಯೇ ಮೊದಲ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವ ಬಿಜೆಪಿ, ಎರಡನೇ ಅಭ್ಯರ್ಥಿಯನ್ನಾಗಿ ಚಿತ್ರನಟ ಜಗ್ಗೇಶ್‌ ಅವರನ್ನು ಕಣಕ್ಕಿಳಿಸುವ ಅಚ್ಚರಿಯ ತೀರ್ಮಾನವನ್ನು ಭಾನುವಾರ ಪ್ರಕಟಿಸಿ್ತು.

ನಿರ್ಮಲಾ ಸೀತಾರಾಮನ್‌ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಈ ಬಾರಿಯೂ ಅವರನ್ನೇ ಮೊದಲ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವಂತೆ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿಯೂ ಶಿಫಾರಸು ಮಾಡಿತ್ತು. ಮೊದಲ ಸ್ಥಾನಕ್ಕೆ ಅವರೊಬ್ಬರ ಹೆಸರನ್ನು ಮಾತ್ರ ಬಿಜೆಪಿ ರಾಷ್ಟ್ರೀಯ ಘಟಕಕ್ಕೆ ಕಳುಹಿಸಲಾಗಿತ್ತು. ತಮಿಳುನಾಡು ಮೂಲದವರಾದ ನಿರ್ಮಲಾ ಎರಡನೇ ಬಾರಿಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಲಿದ್ದಾರೆ.

ಎರಡನೇ ಅಭ್ಯರ್ಥಿ ಆಯ್ಕೆಗೆ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ರಾಜ್ಯಸಭೆಯ ಹಾಲಿ ಸದಸ್ಯ ಕೆ.ಸಿ.ರಾಮಮೂರ್ತಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಲಹರ್‌ ಸಿಂಗ್‌ ಸಿರೋಯ, ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ಮತ್ತು ಉದ್ಯಮಿ ಪ್ರಕಾಶ್‌ ಶೆಟ್ಟಿ ಹೆಸರುಗಳನ್ನು ಶಿಫಾರಸು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT