ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್
ಈ ಸಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ 9,823 ಅರ್ಜಿಗಳು

ಉಡುಪಿ: ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 9,823 ಅರ್ಜಿಗಳು ಬಂದಿದ್ದು, ತೆರೆಮರೆಯ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
ಆದಿ ಉಡುಪಿಯಲ್ಲಿ ₹5 ಕೋಟಿ ವೆಚ್ಚದದಲ್ಲಿ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರ
ವೇರಿಸಿ ಮಾತನಾಡಿದ ಅವರು, ‘ಪ್ರಶಸ್ತಿಪುರಸ್ಕೃತರ ಆಯ್ಕೆಗೆ ಸಮಿತಿ ರಚನೆಯಾಗಿದ್ದು, ಮೊದಲ ಸಭೆಯೂ ಮುಗಿದಿದೆ’ ಎಂದರು.
‘ಮಾತಾಡು ಮಾತಾಡು ಕನ್ನಡ’ ಅಭಿಯಾನ ನಡೆಸಲು ಸಿದ್ಧತೆ ನಡೆದಿದೆ. 13 ಜಿಲ್ಲೆಗಳಲ್ಲಿ ರಂಗಮಂದಿರ ನಿರ್ಮಾಣಕ್ಕೆ ತಲಾ ₹5 ಕೋಟಿ, ತಾಲ್ಲೂಕು ರಂಗಮಂದಿರಗಳ ನಿರ್ಮಾಣಕ್ಕೆ ₹2 ಕೋಟಿ ನೀಡಲಾಗುವುದು ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.