ಬುಧವಾರ, ಮೇ 25, 2022
29 °C

ಡಾ. ಸುದರ್ಶನ್‌ಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹೆಸರಾಂತ ವೈದ್ಯ ಡಾ.ಎಂ.ಕೆ. ಸುದರ್ಶನ್ ಅವರನ್ನು ರಾಜ್ಯ ಸರ್ಕಾರವು ಈ ಸಾಲಿನಲ್ಲಿ ವೈದ್ಯಕೀಯ ಕ್ಷೇತ್ರದ ಗಣ್ಯರಿಗೆ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಪ್ರಾಧ್ಯಾಪಕರಾಗಿ, ಡೀನ್ ಆಗಿ ಹಾಗೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರುವ  ಡಾ.ಎಂ.ಕೆ. ಸುದರ್ಶನ್ ಅವರು ವೈದ್ಯಕೀಯ ಶಿಕ್ಷಣದಲ್ಲಿ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲು ಶ್ರಮಿಸಿದವರು. ವೃತ್ತಿ ಬದುಕಿನಲ್ಲಿ ಹತ್ತು ಹಲವು ಹುದ್ದೆಗಳನ್ನು ಅಲಂಕರಿಸಿರುವ ಇವರು ವೈದ್ಯಕೀಯ ಕ್ಷೇತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ.

ರಾಜ್ಯ ಸರ್ಕಾರ ರಚಿಸಿದ್ದ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರಾಗಿ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದಾರೆ. ಪ್ರಸ್ತುತ ಕಿಮ್ಸ್‌ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು